newsics.com
ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತದಲ್ಲಿ 11 ಆರ್ ಸಿಬಿ ಅಭಿಮಾನಿಗಳು ಸಾವು ಪ್ರಕರಣ ಸಂಬಂಧ ಬಂಧನ ಭೀತಿಯಲ್ಲಿದ್ದ ಕೆ ಎಸ್ ಸಿಎ ಆಡಳಿತ ಮಂಡಳಿಯ ಮೂವರು ಮೂವರು ಪದಾಧಿಕಾರಿಗಳಿಗೆ ಹೈಕೋರ್ಟ್ ಬಿಗ್ ರಿಫೀಲ್ ನೀಡಿದೆ.
ಬೆಂಗಳೂರಿನ ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ಕೆಎಸ್‌ಸಿಎ ಆಡಳಿತಾಧಿಕಾರಿಗಳನ್ನು ಬಂಧಿಸುವಂತೆ ಮಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದರು. ಈ ಹಿನ್ನೆಲೆಯಲ್ಲಿ ತಮ್ಮ ಮೇಲೆ ದಾಖಲಾದ ಎಫ್‌ಐಆರ್ ರದ್ದುಗೊಳಿಸುವಂತೆ ಕೆಎಸ್‌ಸಿಎ ಅಧಿಕಾರಿಗಳು ಹೈಕೋರ್ಟ್ ಮೊರೆ ಹೋಗಿದ್ದರು.
ಪ್ರಕರಣದ ಎ-2, ಎ-3, ಮತ್ತು ಎ-4ನೇ ಆರೋಪಿಗಳ ವಿರುದ್ಧ ಬಲವಂತದ ಕ್ರಮತೆಗೆದುಕೊಳ್ಳಬಾರದು. ಆರೋಪಿಗಳು ತನಿಖೆಗೆ ಸಹಹಕರಿಸಬೇಕು. ಕೆ ಎಸ್ ಸಿಎ ಅಧಿಕಾರಿಗಳ ವಿರುದ್ಧ ಬಲವಂತದ ಕ್ರಮ ಬೇಡ ಎಂದು ಹೈಕೋರ್ಟ್ ಏಕಸದಸ್ಯ ಪೀಠದಿಂದ ಮಧ್ಯಂತರ ಆದೇಶ ಹೊರಡಿಸಲಾಯಿತು.