newsics.com
ಚಿಕ್ಕಬಳ್ಳಾಪುರ: ಇಬ್ಬರು ಹೆಣ್ಮಕ್ಕಳನ್ನು ಕೆರೆಗೆ ಹಾಕಿ ತಾನೂ ಸಾವಿಗೆ ಶರಣಾದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ರಂಗಧಾಮ ಕೆರೆಯಲ್ಲಿ ನಡೆದಿದೆ.
ಮೃತರು ಚಿಕ್ಕಬಳ್ಳಾಪುರ ತಾಲೂಕಿನ ಬಾಧಗಾನಹಳ್ಳಿ ನಿವಾಸಿಗಳು ಎಂದು ತಿಳಿದುಬಂದಿದೆ. ತಾಯಿ ಮತ್ತು ಇಬ್ಬರು ಹೆಣ್ಣು ಮಕ್ಕಳು ಗುರುವಾರ ಸಂಜೆಯಿಂದ ಕಾಣೆಯಾಗಿದ್ದರು. ಶುಕ್ರವಾರ (ಜೂ.06) ಕೆರೆಯಲ್ಲಿ ತಾಯಿ ಮತ್ತು ಮಕ್ಕಳ ಶವ ಪತ್ತೆಯಾಗಿದೆ
ತಾಯಿ ಲಾವಣ್ಯ (30), ಮಗಳು ನಿಹಾರಿಕಾ (9) ಹಾಗೂ ನೇಹಾ (6) ಮೃತ ದುರ್ದೈವಿಗಳು. ಕೌಟುಂಬಿಕ ಕಲಹದಿಂದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮೃತರು ಚಿಕ್ಕಬಳ್ಳಾಪುರ ತಾಲೂಕಿನ ಬೋದಗಾನಹಳ್ಳಿ ಗ್ರಾಮದವರು.
ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.