Manipur Violence ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
newsics.com ಇಂಫಾಲ: ಮಣಿಪುರದಲ್ಲಿ ಮತ್ತೆ ಪ್ರತಿಭಟನೆ, ಹಿಂಸಾಚಾರ ಆರಂಭವಾಗಿದ್ದು, ಮುಂಜಾಗೃತಾ ಕ್ರಮವಾಗಿ ಐದು ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಬಿಷ್ಣುಪುರದಲ್ಲಿ ಸಂಪೂರ್ಣ ಕರ್ಫ್ಯೂ ಜಾರಿಗೊಳಿಸಲಾಗಿದೆ. ಇಂಟರ್ ನೆಟ್ ಸೇವೆ ಸಂಪೂರ್ಣ ಸ್ಥಗಿತಗೊಂಡಿದೆ.ಮೈತೇಯಿ ಸಮುದಾಯದ ಆರಂಬಾಯಿ ತೆಂಗೋಲ್ ಸಂಘಟನೆಯ ನಾಯಕನನ್ನು ಬಂಧಿಸಲಾಗಿದೆ ಎಂಬ ಸುದ್ದಿ ಬೆನ್ನಲ್ಲೇ ಶನಿವಾರ ತಡರಾತ್ರಿ ಪ್ರತಿಭಟನೆಗಳು ತೀವ್ರ ಸ್ವರೂಪ ಪಡೆದುಕೊಂಡವು. ಈ ಹಿನ್ನೆಲೆಯಲ್ಲಿ ಇಂಫಾಲ ಕಣಿವೆಯ ಐದು ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ
Copy and paste this URL into your WordPress site to embed
Copy and paste this code into your site to embed