newsics.com
ಮೈಸೂರು: ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ ನನ್ನ ತಪ್ಪೇನಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಸಿಎಂ, ನ್ಯಾಯಾಂಗ ತನಿಖೆಗೆ ಆದೇಶ ಮಾಡಿದ್ದೇವಲ್ಲಾ? ಸರ್ಕಾರ ಎಲ್ಲಿ ತಪ್ಪು ಮಾಡಿದೆ? ಎಂದು ಸಿಎಂ ಪ್ರಶ್ನಿಸಿದ್ದಾರೆ. ವಿಧಾನಸೌಧದ ಡಿಸಿಪಿ ಬರೆದ ಪತ್ರ ನನ್ನ ಬಳಿ ಬಂದಿಲ್ಲ. ವಿಧಾನಸೌಧದಲ್ಲಿ ಏನಾದರೂ ಘಟನೆ ಆಗಿದೆಯಾ? ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಿದ್ದವರು ಯಾರು? ಅದಕ್ಕೆ ಪೊಲೀಸರನ್ನ ಅಮಾನತು ಮಾಡಿದ್ದೇವೆ ಎಂದು ಹೇಳಿದ್ದಾರೆ.
ಅಧಿಕಾರಿಗಳ ಜೊತೆಗೆ ರೆಗ್ಯುಲರ್ ಆಗಿ ಸಭೆ ನಡೆಸಿದ್ದೇನೆ. ಸರ್ಕಾರಕ್ಕೆ ಯಾಕೆ ಮುಜುಗರ ಆಗಬೇಕು. ಕುಂಭಮೇಳದಲ್ಲಿಯೂ ನೂರಾರು ಜನ ಮೃತಪಟ್ಟಿದ್ದರು. ಆಗ ಪ್ರಧಾನಮಂತ್ರಿ ರಾಜೀನಾಮೆ ಕೊಟ್ಟರಾ? ಮುಖ್ಯ ಕಾರ್ಯದರ್ಶಿ ನನ್ನನ್ನು ಕರೆದರು. ನಾನು ಕಾರ್ಯಕ್ರಮಕ್ಕೆ ಹಾಜರಾದೆ. ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಹಿತಕರ ಘಟನೆ ನಡೆದಿಲ್ಲ. ರಾಜ್ಯದಲ್ಲಿ ಇಂತಹ ಘಟನೆಗಳು ಯಾವತ್ತೂ ಸಂಭವಿಸಬಾರದು ಎಂದು ಹೇಳಿದ್ದಾರೆ.