newsics.com
ಬೆಂಗಳೂರು: ರಾಜ್ಯದ ವಿವಿಧೆಡೆ ಇಂದಿನಿಂದ ಭಾರೀ ಗಾಳಿ ಸಹಿತ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆ ಹೊರತಾಗಿ ಉಳಿದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಕರಾವಳಿ ಜಿಲ್ಲೆಗಳ ಹಲವು ಕಡೆ ಸೋಮವಾರ ಮತ್ತು ಮಂಗಳವಾರ ಸಾಧಾರಣ ಮಳೆ ಆಗುವ ಸಂಭವ ಇದೆ. ಬುಧವಾರದ ಈ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಮಂಡ್ಯ, ರಾಮನಗರ, ಚಿತ್ರದುರ್ಗ, ದಾವಣಗೆರೆ, ತುಮಕೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಕೊಡಗು, ಬಳ್ಳಾರಿ, ವಿಜಯನಗರ, ಕೋಲಾರ ಜಿಲ್ಲೆಯಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದ ಗಾಳಿ, ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ.