newsics.com
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ನಾಳೆಯಿಂದ ಎರಡು ದಿನಗಳ ಕಾಲ ಭಾರಿ ಮಳೆಯಾಗಲಿದ್ದು, ನಾಳೆ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ನಾಳೆಯಿಂದ ಕೊಡಗು ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ನದಿತೀರ, ಬೆಟ್ಟಗುಡ್ಡಗಳ ನಿವಾಸಿಗಳು ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ. ಅಲ್ಲದೇ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಇನ್ನು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳುರು, ಶಿವಮೊಗ್ಗ, ಕೊಡಗು, ಹಾವೇರಿ ಜಿಲ್ಲೆಗಳಲ್ಲಿಯೂ ಧಾರಾಕಾರ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ