newsics.com
ಬೆಂಗಳೂರು: ಶಾಸಕರು ಹಾಗೂ ಸಚಿವರ ಒತ್ತಡ ಹೆಚ್ಚಾಗಿದ್ದು, ಹೊಸ ಜಿಲ್ಲೆಗಳ ರಚನೆಗೆ ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ.
ಗೌರಿಬಿದನೂರಿನಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬೆಳಗಾವಿಯಲ್ಲಿ ಮಾತ್ರ ಹೊಸ ಜಿಲ್ಲೆ ರಚಿಸುವ ಬಗ್ಗೆ ಬೇಡಿಕೆ ಇದ್ದು, ಇದಕ್ಕೆ ಸಂಬಂಧಿಸಿದಂತೆ ಶಾಸಕರು, ಸಚಿವರು ಮಾತು ಸಂಸದರ ಸಭೆಯನ್ನು ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಉತ್ತರ ಕರ್ನಾಟಕದಲ್ಲಿ ಜಿಲ್ಲೆಗಳ ವಿಭಜನಯೆ ಕೂಗು ಇದೀಗ ಹೆಚ್ಚಾಗಿದೆ. ರಾಜ್ಯದ ಅತಿದೊಡ್ಡ ಜಿಲ್ಲೆ ಬೆಳಗಾವಿ ಜಿಲ್ಲೆಯ ವಿಭಜನೆಗೆ ಕುರಿತು ಸ್ಥಳೀಯ ಶಾಸಕರು ಹಾಗೂ ಸಚಿವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ಈ ಹಿಂದೆ ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದ್ದು, ಪ್ರಸ್ತುತ 31 ಜಿಲ್ಲೆಗಳ ಪೈಕಿ ಉತ್ತರ ಕರ್ನಾಟಕದ ಜಿಲ್ಲೆಗಳ ವಿಭಜನೆಯ ಕೂಗು ಹೆಚ್ಚಾಗಿದ್ದು, ಅತಿ ದೊಡ್ಡ ಜಿಲ್ಲೆ ಬೆಳಗಾವಿಯನ್ನು ವಿಭಜಿಸಿ ಬೈಲಹೊಂಗಲ ಅಥವಾ ಗೋಕಾಕ್, ಬೆಳಗಾವಿ ಹಾಗೂ ಚಿಕ್ಕೋಡಿ ಜಿಲ್ಲೆಗಳ ರಚನೆಗೆ ಬೇಡಿಕೆಯಿದೆ.
ಇನ್ನೂ ತುಮಕೂರಿನ ಮಧುಗಿರಿ, ತಿಪಟೂರು, ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಜಿಲ್ಲೆಗಳಾಗಬೇಕು ಎಂಬ ಒತ್ತಾಯ ಕೇಳಿ ಬಂದಿದೆ. ಅಲ್ಲದೇ ಉತ್ತರ ಕನ್ನಡ ಜಿಲ್ಲೆಯಲ್ಲಿ ಶಿರಸಿ, ಮೈಸೂರಿನ ಹುಣಸೂರು ಜಿಲ್ಲೆಗಳಾಗಬೇಕು ಎಂಬುದು ಅಲ್ಲಿನ ಜನರ ಆಗ್ರಹಿಸಿದ್ದಾರೆ.
Rain Alert : ರಾಜ್ಯಾದ್ಯಂತ ಭಾರೀ ಮಳೆ ಹಿನ್ನೆಲೆ ಇಂದು ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ.!