newsics.com
ಅಹಮದಾಬಾದ್ : ಗುಜರಾತ್ನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ನೂರಾರು ಪ್ರಯಾಣಿಕರನ್ನು ಹೊತ್ತು ಲಂಡನ್ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವು ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ವಿಮಾನ ಪತನವಾಗಿದೆ. ಈ ವಿಮಾನದಲ್ಲಿ ಗುಜರಾತ್ನ ಮಾಜಿ ಸಿಎಂ ವಿಜಯ್ ರೂಪಾನಿ ಕೂಡ ಇದೇ ವಿಮಾನದಲ್ಲಿ ಅಹಮದಾಬಾದ್ನಿಂದ ಪ್ರಯಾಣ ಮಾಡಿದ್ದರು ಎಂದು ವರದಿಯಾಗಿದೆ.
ಲಂಡನ್ಗೆ ತೆರಳುತ್ತಿದ್ದ ಏರ್ ಇಂಡಿಯಾ ಬೋಯಿಂಗ್ 787-8 ಡ್ರೀಮ್ಲೈನರ್ ವಿಮಾನವು ಗುರುವಾರ ಮಧ್ಯಾಹ್ನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಅಪಘಾತಕ್ಕೀಡಾಯಿತು. ವಿಮಾನವು 230 ಪ್ರಯಾಣಿಕರು ಮತ್ತು 12 ಸಿಬ್ಬಂದಿ ಸೇರಿದಂತೆ 242 ಜನರನ್ನು ಹೊತ್ತೊಯ್ಯುತ್ತಿತ್ತು, ಅವರಲ್ಲಿ ಒಬ್ಬರು ಗುಜರಾತ್ ಮಾಜಿ ಮುಖ್ಯಮಂತ್ರಿ ಇದ್ದರು ಎಂದು ಹೇಳಲಾಗಿದೆ. ಸದ್ಯ, ಅವರ ಆರೋಗ್ಯ ಸ್ಥಿತಿ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.