Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Bigg Boss ಬಿಗ್‌ ಬಾಸ್‌ ಹೊಸ ಸೀಸನ್‌ ನಲ್ಲಿ ಯಾರೆಲ್ಲ ಇರಲಿದ್ದಾರೆ?
ಪ್ರಮುಖಮನರಂಜನೆ

Bigg Boss ಬಿಗ್‌ ಬಾಸ್‌ ಹೊಸ ಸೀಸನ್‌ ನಲ್ಲಿ ಯಾರೆಲ್ಲ ಇರಲಿದ್ದಾರೆ?

Share
2 Min Read
SHARE

newsics.com

ಬಿಗ್‌ ಬಾಸ್ ಹೊಸ ಸೀಸನ್‌ಗೆ ಭರ್ಜರಿ ತಯಾರಿ ಶುರುವಾಗಿದೆ. ಬಿಗ್ ಬಾಸ್‌ ಕನ್ನಡ 12 ಕಾರ್ಯಕ್ರಮದ ಸಿದ್ದತೆಗೆ ಈಗಾಗಲೇ ಚಾಲನೆ ಸಿಕ್ಕಿದ್ದು, ಈ ಬಾರಿಯೂ ಹೋಸ್ಟ್ ಆಗಿ ಕಿಚ್ಚ ಸುದೀಪ್ ಅವರೇ ಮುಂದುವರೆಯುತ್ತಾರಂತೆ. ಇದಕ್ಕಾಗಿ ಕಿಚ್ಚ ಸುದೀಪ್‌ ಕೆಲವು ಕಂಡೀಷನ್‌ಗಳನ್ನ ಹಾಕಿದ್ದಾರೆ ಎನ್ನಲಾಗಿದೆ.

ಈ ಬಾರಿ ದೊಡ್ಮನೆಗೆ ಯಾರೆಲ್ಲಾ ಸ್ಪರ್ಥಿಗಳು ಹೋಗುತ್ತಾರೆ ಎಂಬ ಡೌಟ್‌ ವೀಕ್ಷಕರಿಗೆ ಕಾಡುತ್ತಿದೆ. ಇನ್ನು ಸಾಮಾನ್ಯವಾಗಿ ಬಿಗ್ ಬಾಸ್ ಇಲ್ಲಿಯವರೆಗೆ ಮೂರು ತಿಂಗಳು ನಡೆಯುತ್ತಿತ್ತು. 15 ರಿಂದ 20 ಸ್ಫರ್ಧಿಗಳು ಇರುತ್ತಿದ್ದರು. ಸೆಪ್ಟೆಂಬರ್ ಅಥವಾ ಅಕ್ಟೋಬರ್ ವೇಳೆಗೆ ಕಾರ್ಯಕ್ರಮ ಶುರುವಾಗುತ್ತಿತ್ತು. ಆದರೆ ಈ ವರ್ಷ ವಿಭಿನ್ನವಾಗಿರಲಿದೆ.

ಭಾರೀ ಬದಲಾವಣೆಯೊಂದಿಗೆ ಬಿಗ್‌ ಬಾಸ್‌ ಜನರ ಎದುರು ಬರಲಿದೆ. ವರದಿಯ ಪ್ರಕಾರ ಈ ಬಾರಿ ಐದೂವರೆ ತಿಂಗಳು ಬಿಗ್ ಬಾಸ್ ಕಾರ್ಯಕ್ರಮ ನಡೆಯಲಿದೆ. ಜುಲೈ 30 ರಿಂದ ಬಿಗ್‌ ಬಾಸ್ ಕಾರ್ಯಕ್ರಮ ಶುರುವಾಗಲಿದೆ ಎನ್ನಲಾಗಿದೆ. ಜನವರಿ 2026ರ ಬಿಗ್‌ ಬಾಸ್‌ ನಡೆಯಲಿದೆ ಎಂದು ಹೇಳಲಾಗುತ್ತಿದೆ.
ಈಗಾಗಲೇ ಬಿಗ್‌ ಬಾಸ್‌ ಸ್ಫರ್ಧಿಗಳ ಹುಡುಕಾಟ ಶುರುವಾಗಿದ್ದು 7 ಸ್ಫರ್ಧಿಗಳ ಹೆಸರನ್ನು ‘ಡೆಕ್ಕನ್ ಕ್ರೋನಿಕಲ್’ ಪತ್ರಿಕೆ ಬಹಿರಂಗಗೊಳಿಸಿದೆ. ಆ ಪ್ರಕಾರ, ಯೂಟ್ಯೂಬರ್ ಗೌರವ್ ತನೇಜಾ, ಶಿಲ್ಪಾ ಶೆಟ್ಟಿಯ ಪತಿ ರಾಜ್ ಕುಂದ್ರಾ ಬಿಗ್ ಬಾಸ್‌ ಮನೆಯನ್ನು ಪ್ರವೇಶಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.
ಒಂದು ಕಾಲದ ಖ್ಯಾತ ಹೀರೋಯಿನ್‌ ಬಣ್ಣದ ಲೋಕದಿಂದ ದೂರವಾಗಿ ಸನ್ಯಾಸ ದೀಕ್ಷೆ ಪಡೆದ ಮಮತಾ ಕುಲಕರ್ಣಿ ಕೂಡ ಈ ಬಾರಿ ಬಿಗ್ ಬಾಸ್ ಪ್ರವೇಶಿಸಲಿದ್ದಾರೆ ಎನ್ನಲಾಗ್ತಿದೆ. ಕೃಷ್ಣಾ ಶ್ರಾಫ್, ಮಿಕ್ಕಿ ಮೇಕ್‌ ಓವರ್, ಫೈಸಲ್ ಶೇಖ್, ಧೀರಜ್ ಧೋಪರ್ ಕೂಡ ಬಿಗ್ ಬಾಸ್‌ ಮನೆಗೆ ಈ ಸಲ ಎಂಟ್ರಿ ಕೊಡಲಿದ್ದಾರೆ ಎಂದು ವರದಿಯಾಗಿದೆ.
ಬಿಗ್‌ ಬಾಸ್‌ ಹಿಂದಿ ಸೀಸನ್‌ 19 ನ್ನು ಕೂಡ ಸಲ್ಮಾನ್ ಖಾನ್ ನಿರೂಪಣೆ ಮಾಡಲಿದ್ದಾರೆ. ಇನ್ನು ಈ ಬಾರಿ ಸಲ್ಮಾನ್ ಖಾನ್ ಬಿಗ್ ಬಾಸ್ ನಿರೂಪಣೆಗೆ 300 ಕೋಟಿ ಸಂಭಾವನೆ ಪಡೆಯಲಿದ್ದಾರೆ ಎಂದು ಸಿಯಾಸತ್ ಡಾಟ್ ಕಾಮ್ ಮತ್ತು ಬಾಲಿವುಡ್ ಲೈಫ್ ವೆಬ್ ಸೈಟ್‌ಗಳು ವರದಿ ಮಾಡಿವೆ. ಈ ಬಗ್ಗೆ ಯಾವುದೇ ನಿಖರ ಮಾಹಿತಿ ಹೊರ ಬಿದ್ದಿಲ್ಲ.
ಬಿಗ್ ಬಾಸ್ ಗೆ ಪ್ರವೇಶಿಸಲಿರುವ ಸಂಭಾವ್ಯ ಸ್ಫರ್ಧಿಗಳ ಪಟ್ಟಿ ಕೇಳಿ ಪ್ರೇಕ್ಷಕರಲ್ಲಿ ಕುತೂಹಲ ಹೆಚ್ಚಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಕುರಿತು ಚರ್ಚೆ ಶುರುವಾಗಿದೆ. ಈ 7 ಜನರ ಜೊತೆ ಮತ್ತೆ ಯಾರೆಲ್ಲ ಈ ಬಾರಿ ಬಿಗ್ ಬಾಸ್ ಮನೆಯಲ್ಲಿ ಎಂಟ್ರಿ ಪಡೆಯಲಿದ್ದಾರೆ ಎಂಬುದು ಮುಂದಿನ ದಿನಗಳಲ್ಲಿ ತಿಳಿಯಲಿದೆ.

CM Siddaramaiah ಹೊಸ ಜಿಲ್ಲೆಗಳ ರಚನೆ ಕುರಿತು ಬಿಗ್‌ ಅಪ್‌ಡೇಟ್‌ ; ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

TAGGED:Who will be in the new season of Bigg Boss?; Here is the list of potential contestants
Share This Article
Facebook Twitter Copy Link Print
Previous Article CM Siddaramaiah ಹೊಸ ಜಿಲ್ಲೆಗಳ ರಚನೆ ಕುರಿತು ಬಿಗ್‌ ಅಪ್‌ಡೇಟ್‌ ; ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
Next Article Video viral ಮೊಸಳೆ ಮೇಲೆ ಸವಾರಿ ಮಾಡಿದ ಸ್ವಾಮೀಜಿ!; ವೈರಲ್ ವಿಡಿಯೋ ನೋಡಿ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?