newsics.com
ದೇವನಹಳ್ಳಿ: ಆಂಧ್ರ ಸಾರಿಗೆ ಬಸ್ ಹಾಗೂ ಲಾರಿ ನಡುವೆ ಡಿಕ್ಕಿಯಾಗಿ ಇಬ್ಬರು ಮಕ್ಕಳು ಸೇರಿ ನಾಲ್ವರು ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಗೊಟ್ಟಿಪುರ ಗೇಟ್ ಬಳಿ ಶುಕ್ರವಾರ ಮುಂಜಾನೆ ನಡೆದಿದೆ.
ಆಂಧ್ರ ಸಾರಿಗೆ ಬಸ್ ತಿರುಪತಿಯಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 16 ಮಂದಿ ಪ್ರಯಾಣಿಕರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳಿಗೆ ಹೊಸಕೋಟೆಯ ಸಿಲಿಕಾನ್ ಸಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಬಸ್ ಓವರ್ಟೇಕ್ ಮಾಡುವಾಗ ಮುಂದೆ ಹೋಗುತ್ತಿದ್ದ ಲಾರಿಗೆ ಡಿಕ್ಕಿಯಾಗಿದೆ. ಡಿಕ್ಕಿಯ ತೀವ್ರತೆಗೆ ಬಸ್ ನಜ್ಜುಗುಜ್ಜಾಗಿದೆ. ಚಾಲಕ ನಿದ್ದೆ ಮಂಪರಿನಲ್ಲಿ ಒವರ್ ಟೇಕ್ ಮಾಡಲು ಹೋಗಿ ದುರಂತ ಸಂಭವಿಸಿದೆ.