newsics.com
ಮಂಗಳೂರು : ಅಪಾರ್ಟ್ ಮೆಂಟ್ ನ 12ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಮಂಗಳೂರು ಬಳಿಯ ಕುತ್ತಾರಿನಲ್ಲಿ ನಡೆದಿದೆ.
ಕಟ್ಟಡದಿಂದ ಬಿದ್ದು ವೈದ್ಯ ದಂಪತಿಯ ಪುತ್ರಿ ಹಿಬಾ ಐಮನ್ (15) ಸಾವನ್ನಪ್ಪಿದ್ದಾಳೆ. ನಿನ್ನೆ ರಾತ್ರಿ ಬಟ್ಟೆ ಒಣಗಿಸಲೆಂದು ಹೋಗಿದ್ದ ಹಿಬಾ 12ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾಳೆ.
ವೈದ್ಯ ದಂಪತಿ ಡಾ.ಮುಮ್ತಾಜ್ ಅಹ್ಮದ್ ದಂಪತಿ ಅಪಾರ್ಟ್ ಮೆಂಟ್ ನ 12ನೇ ಮಹಡಿಯಲ್ಲಿ ವಾಸವಾಗಿದ್ದರು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.