newsics.com
ರಾಯಚೂರು: ಕಲುಷಿತ ನೀರು ಸೇವಿಸಿ 30 ಜನರು ಅಸ್ವಸ್ಥಗೊಂಡಿರುವ ಘಟನೆ ಸಿಂಧನೂರು ತಾಲೂಕಿನ ಭೂತಲದಿನ್ನಿ ಗ್ರಾಮದಲ್ಲಿ ನಡೆದಿದೆ.
ಟ್ಯಾಂಕರ್ನಿಂದ ಪೂರೈಕೆಯಾದ ನೀರು ಕುಡಿದ ಪರಿಣಾಮ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಕಲುಷಿತ ನೀರು ಕುಡಿದು 25ಕ್ಕೂ ಹೆಚ್ಚು ಜನರು ವಾಂತಿ ಭೇದಿಯಿಂದ ಬಳಲಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಟ್ಯಾಂಕರ್ ಸ್ವಚ್ಛಗೊಳಿಸದೆ ನೀರು ಪೂರೈಕೆ ಮಾಡಿರುವ ಆರೋಪ ಕೇಳಿಬಂದಿದೆ. ಗ್ರಾಮ ಪಂಚಾಯಿತಿಯ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವೈದ್ಯರು ಗ್ರಾಮಕ್ಕೆ ಭೇಟಿ ನೀಡಿ ಚಿಕಿತ್ಸೆ ನೀಡಿದ್ದಾರೆ. ಟ್ಯಾಂಕರ್ ಸ್ವಚ್ಛತೆ ಕುರಿತು ಪ್ರಶ್ನೆಗಳು ಎದ್ದಿವೆ.