newsics.com
ಅಹ್ಮದಾಬಾದ್ ವಿಮಾನ ದುರಂತದಲ್ಲಿ ಮೃತಪಟ್ಟ ಸಂತ್ರಸ್ತ ಕುಟುಂಬಕ್ಕೆ ಏರ್ ಇಂಡಿಯಾ ಹೆಚ್ಚುವರಿ 25 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದೆ.
ಜೂನ್ 12ರಂದು ಅಹ್ಮದಾಬಾದ್ ಏರ್‌ಪೋರ್ಟ್ ಬಳಿ ದುರಂತವಾಗುತ್ತಿದ್ದಂತೆ ಮೊದಲ ದಿನವೇ ಏರ್ ಇಂಡಿಯಾ 1 ಕೋಟಿ ರೂಪಾಯಿ ಪರಿಹಾರ ಘೋಷಣೆ ಮಾಡಿತ್ತು. ಘಟನೆ ನಡೆದ 3ನೇ ದಿನಕ್ಕೆ 1 ಕೋಟಿ ರೂಪಾಯಿ ಪರಿಹಾರಕ್ಕೆ ಹೆಚ್ಚುವರಿಯಾಗಿ 25 ಲಕ್ಷ ರೂಪಾಯಿ ನೀಡಲಾಗುತ್ತಿದೆ.
ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ AI-171 ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಪತನಗೊಂಡು ಕಟ್ಟಡಗಳಿಗೆ ಡಿಕ್ಕಿ ಹೊಡೊದು ಬೆಂಕಿಯಲ್ಲಿ ಹೊತ್ತಿ ಉರಿದಿತ್ತು. ವಿಮಾನದಲ್ಲಿದ್ದವರು, ಕಾಲೇಜು ಹಾಸ್ಟೆಲ್ ಕಟ್ಟಡ, ಸುತ್ತಮುತ್ತಲ ಪ್ರದೇಶದಲ್ಲಿದ್ದವರು ಸೇರಿದಂತೆ 274 ಜನರು ಸಾವನ್ನಪ್ಪಿದ್ದರು.