Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > controversy over ಮಂತ್ರಾಲಯ- ಉತ್ತರಾದಿ ಮಠಾಧೀಶರ ನಡುವಿನ ಸಂಧಾನ ಸಭೆ ಯಶಸ್ವಿ: ಪದ್ಮನಾಭ ತೀರ್ಥರ ಆರಾಧನೆ ವಿವಾದ ಅಂತ್ಯ, ಭಕ್ತರು ಫುಲ್ ಖುಷ್
ಕರ್ನಾಟಕದೇಶಪ್ರಮುಖ

controversy over ಮಂತ್ರಾಲಯ- ಉತ್ತರಾದಿ ಮಠಾಧೀಶರ ನಡುವಿನ ಸಂಧಾನ ಸಭೆ ಯಶಸ್ವಿ: ಪದ್ಮನಾಭ ತೀರ್ಥರ ಆರಾಧನೆ ವಿವಾದ ಅಂತ್ಯ, ಭಕ್ತರು ಫುಲ್ ಖುಷ್

Share
2 Min Read
SHARE

newsics.com

ಗಂಗಾವತಿ(ಕೊಪ್ಪಳ): ನವವೃಂದಾವನ ಗಡ್ಡೆಯಲ್ಲಿ ಪೂಜಾ ವಿವಾದ ಕುರಿತಂತೆ ಮಂತ್ರಾಲಯ ಹಾಗೂ ಉತ್ತರಾದಿ ಮಠಾಧೀಶರ ನಡುವೆ ಚೆನ್ನೈನಲ್ಲಿ ನಡೆದ ಸಂಧಾನ ಸಭೆ ಯಶಸ್ವಿಯಾಗಿದೆ.

ಕೋರ್ಟ್‌ನಲ್ಲಿದ್ದ ಪದ್ಮನಾಭ ತೀರ್ಥರ ಆರಾಧನೆ ಕುರಿತು ನಡೆಯುತ್ತಿದ್ದ ವಿವಾದ ಸುಖಾಂತ್ಯ ಕಂಡಿದೆ.

ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಆನೆಗೊಂದಿಯ ನವವೃಂದಾವನ ಗಡ್ಡೆಯಲ್ಲಿರುವ ಪದ್ಮನಾಭ ತೀರ್ಥರ ಆರಾಧನೆ ಕುರಿತು ಎರಡು ಮಠಗಳ ನಡುವೆ ಹಲವು ದಶಕಗಳಿಂದ ವಿವಾದ ಇತ್ತು. ಪದ್ಮನಾಭ ತೀರ್ಥರ ಆರಾಧನೆ ವಿವಾದ ಹಲವು ಬಾರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.

ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಮಠಾಧೀಶರು ಪ್ರತಿ ವರ್ಷ ಪೂಜೆ ನೆರವೇರಿಸುತ್ತಿದ್ದರು. ಇತ್ತೀಚೆಗೆ ಸುಪ್ರೀಂ ಕೋರ್ಟ್, ಪೂಜಾ‌ ವಿವಾದವನ್ನು ಮಾತುಕತೆ ಮೂಲಕ‌ ಬಗೆಹರಿಸಿಕೊಳ್ಳಲು ಸಲಹೆ ನೀಡಿತ್ತು. ಹಾಗಾಗಿ ಉಭಯ ಶ್ರೀಗಳು ಚೆನ್ನೈನಲ್ಲಿ ಸಂಧಾನ ಸಭೆ ನಡೆಸಿ ವಿವಾದ ಅಂತ್ಯಗೊಳಿಸಿದ್ದಾರೆ.

ಉತ್ತರಾದಿಮಠದ ಸತ್ಯಾತ್ಮ ತೀರ್ಥರು, ಮಂತ್ರಾಲಯದ ಪೀಠಾಧಿಪತಿ ಸುಬುಧೇಂದ್ರ ಶ್ರೀಗಳು ಮಾತುಕತೆ ನಡೆಸಿ ವಿವಾದ ಬಗೆಹರಿಸಿಕೊಂಡಿದ್ದಾರೆ. ಇದರಿಂದ ಉಭಯ ಮಠಗಳ ಭಕ್ತರು ಹರ್ಷಗೊಂಡಿದ್ದಾರೆ.

ಬಗೆಹರಿಸಿಕೊಳ್ಳಲು ಸಿದ್ಧ:

ಮಂತ್ರಾಲಯ ಮಠ ಎಂದಿಗೂ ಯಾವ ಮಠದ ವಿರುದ್ಧವೂ ನ್ಯಾಯಾಲಯಗಳಲ್ಲಿ ತಾನಾಗಿಯೇ ದಾವೆ ಹೂಡಿಲ್ಲ. ಬೇರೆ ಮಠ ದಾವೆ ಹೂಡಿದಾಗ ನ್ಯಾಯಾಲಯಗಳಲ್ಲಿ ವಾದಿಸಲಾಗಿದೆ. ನವ ಬೃಂದಾವನ, ನರಹರಿತೀರ್ಥರ ಬೃಂದಾವನ ಸೇರಿದಂತೆ ಉಳಿದ ತೀರ್ಥರ ವಿವಾದಗಳನ್ನು ಉಭಯ ಮಠಗಳು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಲು ಮಂತ್ರಾಲಯ ಮಠ ಸದಾ ಸಿದ್ಧವಿದೆ ಎಂದು ಮಂತ್ರಾಲಯ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.

ಹಂಪಿಯ ನರಹರಿತೀರ್ಥರ ಬೃಂದಾವನದ ಬಳಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, ನಮಗೆ ಕಾನೂನು ಪ್ರಕಾರ ಆರಾಧನೆಗೆ ಅವಕಾಶ ದೊರೆತಿದೆ. ನಮ್ಮ ಮಠವು ಎಂದಿಗೂ ದ್ವೇಷ ಸಾಧಿಸಲ್ಲ. ಪ್ರೀತಿ, ಸಹಬಾಳ್ವೆಯಿಂದಲೇ ಮುನ್ನಡೆಯುತ್ತೇವೆ. ಉಭಯ ಮಠಗಳು ವ್ಯಾಜ್ಯ ಬಗೆಹರಿಸಿಕೊಳ್ಳಲು ಸಿದ್ಧರಿದ್ದೇವೆ. ಮಠಗಳನ್ನು ಕೂಡಿಸಿಕೊಂಡು ವ್ಯಾಜ್ಯ ಬಗೆಹರಿಸಿದರೆ ಅದಕ್ಕೂ ಸಿದ್ಧ. ಉನ್ನತ ಮಟ್ಟದ ಸ್ವಾಮೀಜಿಗಳು, ಅಧಿಕಾರಿಗಳು, ಮಾಧ್ಯಮದವರು ಕೂಡ ಗೌರವಯುತವಾಗಿ ವೇದಿಕೆ ಸಿದ್ಧ ಮಾಡಿದರೆ ನಾವು ವ್ಯಾಜ್ಯ ಬಗೆಹರಿಸಿಕೊಳ್ಳಲು ತಯಾರಿದ್ದೇವೆ ಎಂದು ಮಂತ್ರಾಲಯ ಶ್ರೀ ಹೇಳಿದರು.

ನವ ಬೃಂದಾವನ, ನರಹರಿತೀರ್ಥರ ಬೃಂದಾವನ ಸೇರಿದಂತೆ ಉಳಿದ ತೀರ್ಥರ ವಿವಾದಗಳನ್ನು ಉಭಯ ಮಠಗಳು ಒಂದೆಡೆ ಸೇರಿ ಸೌಹಾರ್ದವಾಗಿ ಪೂಜೆ ಸಲ್ಲಿಸೋಣ. ಆದರೆ ಅನ್ಯ ಮಠದವರು ಸೌಹಾರ್ದವಾಗಿ ಪೂಜೆ ಸಲ್ಲಿಸಲು ಬರುತ್ತಿಲ್ಲ. ನರಹರಿತೀರ್ಥರ ಆರಾಧನೆಗೆ ಆಹ್ವಾನಿಸಿದರೂ ಆಗಮಿಸಿಲ್ಲ. ಪರ ಮಠದವರು ಒಪ್ಪುತ್ತಿಲ್ಲ. ಪೂಜೆ, ಆರಾಧನೆಗೆ ನಿರ್ಬಂಧ ಇಲ್ಲ. ವಿವಾದದಿಂದ ಭಕ್ತರು, ಮಠದ ಶಿಷ್ಯರು, ಸಮಾಜದಲ್ಲಿ ಗೊಂದಲ, ಬೇಸರ ಮೂಡುತ್ತದೆ ಎಂದರು.

ಕರ್ನಾಟಕದ ಶೇ.99ರಷ್ಟು ಮಕ್ಕಳಿಗೆ ಮೊಬೈಲ್‌ ಗೀಳು; ವರದಿಯಲ್ಲಿ ಬಹಿರಂಗ

newsics music ಆಲಾಪ| ಭಾಗ್ಯದ ಬಳೆಗಾರ ಹೋಗಿ ಬಾ ನನ್ ತವರಿಗೆ…

Air India plane crash ಅಹಮದಾಬಾದ್ ವಿಮಾನ ದುರಂತ: ಮೃತರ ಸಂಖ್ಯೆ 274ಕ್ಕೆ ಏರಿಕೆ

TAGGED:controversy over the worship of Padmanabha Tirtha ended
Share This Article
Facebook Twitter Copy Link Print
Previous Article Air India flight ಅಹಮದಾಬಾದ್ ವಿಮಾನ ದುರಂತ ಹಿನ್ನೆಲೆ ಇಂದು ಕೇಂದ್ರ ಸಚಿವರ ಮಹತ್ವದ ಸಭೆ
Next Article FLIGHT CRASH: ಅಹಮದಾಬಾದ್‌ ವಿಮಾನ ದುರಂತ; ತನಿಖೆಗೆ ಸಮಿತಿ ರಚನೆ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?