newsics.com
ಶಿವಮೊಗ್ಗ : ಕಾಂತಾರ ಚಾಪ್ಟರ್-1 ಸಿನಿಮಾ ಶೂಟಿಂಗ್ ಆರಂಭದಿಂದಲೂ ಒಂದಲ್ಲ ಒಂದು ಸುದ್ದಿಯಲ್ಲಿದೆ. ಇದೀಗ ಶೂಟಿಂಗ್ ವೇಳೆ ಮತ್ತೊಂದು ಅವಘಡ ಶನಿವಾರ ಸಂಭವಿಸಿದೆ. ಇದರ ಬೆನ್ನಲ್ಲೆ ನಿನ್ನೆ ರಾತ್ರಿ ಮತ್ತೊಂದು ಅವಘಡ ಸಂಭವಿಸಿದೆ.ಚಿತ್ರದ ನಾಯಕ ರಿಷಬ್ ಶೆಟ್ಟಿ ಸೇರಿದಂತೆ 30 ಕಲಾವಿದರಿದಂತ ಬೋಟ್ ಒಂದು ಮುಗುಚಿದೆ.
ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಹೌದು ಸಿನಿಮಾದ ಚಿತ್ರೀಕರಣ ನಡೆಸಲಾಗುತ್ತಿದ್ದ ಬೋಟ್ ಒಂದು ಮುಗಿಚಿದೆಯಂತೆ. ಬೋಟ್ನಲ್ಲಿ ರಿಷಬ್ ಶೆಟ್ಟಿ ಸೇರಿದಂತೆ ಸುಮಾರು 30ಕ್ಕೂ ಹೆಚ್ಚು ಮಂದಿ ಕಲಾವಿದರು, ಹಾಗೂ ತಂತ್ರಜ್ಞರು ಇದ್ದರೆಂದು ವರದಿ ಆಗಿದೆ. ಚಿತ್ರೀಕರಣ ಚಾಲ್ತಿಯಲ್ಲಿರುವಾಗಲೇ ಬೋಟು ಮುಗಿಚಿದೆ ಆದರೆ ಯಾವುದೇ ಜೀವ ಹಾನಿ ಆಗಿಲ್ಲ. ಕಲಾವಿದರು, ತಂತ್ರಜ್ಞರೆಲ್ಲರೂ ಈಜಿಕೊಂಡು ದಡಕ್ಕೆ ಬಂದಿದ್ದಾರೆ ಎನ್ನಲಾಗುತ್ತಿದೆ.
ಮಾಸ್ತಿಕಟ್ಟೆಯ ಮಾಣಿ ಜಲಾಶಯದಲ್ಲಿ ಸಿನಿಮಾದ ಚಿತ್ರೀಕರಣ ಮಾಡಲಾಗುತ್ತಿತ್ತು. ಕತ್ತಲಿನಲ್ಲೇ ಸಿನಿಮಾದ ಶೂಟಿಂಗ್ ಮಾಡಲಾಗುತ್ತಿತ್ತು. ದೋಣಿ ಮುಗಿಚಿದರೂ ಕಲಾವಿದರು ಮತ್ತು ತಂತ್ರಜ್ಞರು ಸೇಫ್ ಆಗಿದ್ದಾರಾದರೂ ಕ್ಯಾಮೆರಾ ಇನ್ನಿತರೆ ಸೆಟ್ ಪ್ರಾಪರ್ಟಿಗಳು ನೀರು ಪಾಲಾಗಿವೆ ಎನ್ನಲಾಗುತ್ತಿದೆ.
ಕಾಂತಾರ ಸಿನೆಮಾ ಸೆಟ್ ನಲ್ಲಿ ಈಗಾಗಲೇ ಹಲವು ಘಟನೆಗಳಿಂದ ಮೂವರು ಕಲಾವಿದರು ಸಾವನ್ನಪ್ಪಿದ್ದಾರೆ.ಕೇರಳ ಮೂಲದ ಜೂನಿಯರ್ ಆರ್ಟಿಸ್ಟ್ ಒಬ್ಬರು ಈಜಲು ಹೋಗಿ ಮುಳುಗಿ ಪ್ರಾಣಬಿಟ್ಟರು. ಅದಾದ ಮೇಲೆ ಸಿನಿಮಾನಲ್ಲಿ ನಟಿಸಿದ್ದ ಕನ್ನಡದ ಹಾಸ್ಯ ಕಲಾವಿದ ರಾಕೇಶ್ ಪೂಜಾರಿ ಹೃದಯಾಘಾತದಿಂದ ಮೃತಪಟ್ಟರು. ಕೆಲ ದಿನಗಳ ಹಿಂದಷ್ಟೆ ವಿಜು ವಿಕೆ ಎಂಬ ಕೇರಳದ ಕಲಾವಿದ ಮೃತಪಟ್ಟರು. ಇದೀಗ ಬೋಟ್ ಮುಗುಚಿ ಅವಘಡ ಸಂಭವಿಸಿದೆ.