newsics.com
ನವದೆಹಲಿ: ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ರವಿವಾರ ತಡರಾತ್ರಿ ದಿಲ್ಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಯಿಂದಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದ್ದು, ಗ್ಯಾಸ್ಟ್ರೋಎಂಟರಾಲಜಿ ವಿಭಾಗದಲ್ಲಿ ವೈದ್ಯರ ನಿಗಾದಲ್ಲಿದ್ದಾರೆ ಎಂದು ತಿಳಿದುಬಂದಿದೆ.
“ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಯಿಂದಾಗಿ ಅವರನ್ನು ಜಠರ ಸಂಬಂಧಿ ಚಿಕಿತ್ಸಾ ವಿಭಾಗಕ್ಕೆ ದಾಖಲಿಸಲಾಗಿದೆ ಮತ್ತು ನಿಗಾದಲ್ಲಿದ್ದಾರೆ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ ಎಂದು ANI ಸುದ್ದಿ ಸಂಸ್ಥೆ ವರದಿ ಮಾಡಿದೆ.
ಕಳೆದ ವಾರ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರು ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಶಿಮ್ಲಾದ ಆಸ್ಪತ್ರೆಯಲ್ಲಿ ನಿಯಮಿತ ವೈದ್ಯಕೀಯ ಪರೀಕ್ಷೆಗಳಿಗೆ ಒಳಗಾಗಿದ್ದರು.
https://x.com/ANI/status/1934288206456868960?ref_src=twsrc%5Etfw%7Ctwcamp%5Etweetembed%7Ctwterm%5E1934288206456868960%7Ctwgr%5Ede421c797f311d390a4589ab175f9314b0f47bc9%7Ctwcon%5Es1_c10&ref_url=https%3A%2F%2Fm.test.in%2F
Viral video ಏರ್ ಇಂಡಿಯಾ ವಿಮಾನ ದುರಂತದ ವಿಡಿಯೋ ಮಾಡಿದ್ದ ಹುಡುಗ ಈತನೇ ನೋಡಿ!