newsics.com
ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ವಿಚ್ಛೇದಿತ ಮಹಿಳೆಯ ಖಾಸಗಿ ವಿಡಿಯೋಗಳನ್ನು ಚಿತ್ರೀಕರಿಸಿ ಬ್ಲ್ಯಾಕ್‌ಮೇಲ್ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಈ ಸಂಬಂಧ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಆರೋಪಿ ಶ್ರೀನಿವಾಸ್‌ನನ್ನು ಪೊಲೀಸರು ಬಂಧಿಸಿದ್ದಾರೆ.
ಶ್ರೀನಿವಾಸ್ ಎಂಬಾತ ವಿಚ್ಛೇದಿತ ಮಹಿಳೆಯ ಜೊತೆ ಪ್ರೀತಿಯ ಸಂಬಂಧ ಬೆಳೆಸಿದ್ದನು. ನಂತರ ಮದುವೆ ಮಾಡಿಕೊಳ್ಳುವುದಾಗಿ ಭರವಸೆ ನೀಡಿ, ಆತನ ವಿಶ್ವಾಸಕ್ಕೆ ಒಳಪಟ್ಟಿದ್ದ ಮಹಿಳೆಯು ಖಾಸಗಿ ಕ್ಷಣಗಳನ್ನು ಆತನೊಂದಿಗೆ ಹಂಚಿಕೊಂಡಿದ್ದಾಳೆ. ಈ ವೇಳೆ ಆ ಕ್ಷಣಗಳನ್ನು ಆರೋಪಿಯಾಗಿದ್ದ ಶ್ರೀನಿವಾಸ್ ತನ್ನ ಮೊಬೈಲ್‌ನಲ್ಲಿ ಚಿತ್ರಿಸಿದ್ದಾನೆ. ಈ ಫೋಟೋ ಮತ್ತು ವಿಡಿಯೋಗಳನ್ನು ಬಳಸಿ ಅವಳಿಗೆ ಮಾನಸಿಕವಾಗಿ ಒತ್ತಡ ಹಾಕಿ, ನಿರಂತರ ಹಣ ಹಾಗೂ ಚಿನ್ನಾಭರಣಕ್ಕೆ ಬೇಡಿಕೆ ಇಟ್ಟಿದ್ದಾನೆ. ಈ ಬ್ಲ್ಯಾಕ್‌ಮೇಲ್ ಹಾಗೂ ದೋಖಾ ಇಷ್ಟಕ್ಕೆ ನಿಲ್ಲದೇ, ಮಹಿಳೆಯ ಅಣ್ಣನಿಗೂ ಕರೆಮಾಡಿ ಬೆದರಿಕೆ ಹಾಕಿದ್ದಾನೆ.
ಅಷ್ಟೇ ಅಲ್ಲದೆ, ಮಹಿಳೆಯ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ಸೃಷ್ಟಿಸಿ, ಅದರಲ್ಲಿ ಖಾಸಗಿ ವಿಡಿಯೋಗಳನ್ನು ಅಪ್ಲೋಡ್ ಮಾಡುವ ಯತ್ನ ಕೂಡ ಮಾಡಿದ್ದಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾಳೆ.
ಪೋಲಿಸರು ತಕ್ಷಣ ಕಾರ್ಯಪ್ರವೃತ್ತರಾಗಿ ಆರೋಪಿಯನ್ನು ಬಂಧಿಸಿದ್ದಾರೆ. ಶಂಕಿತನನ್ನು ಬಂಧಿಸಿ ಹೆಚ್ಚಿನ ವಿಚಾರಣೆ ಮುಂದುವರಿಸಲಾಗಿದೆ ಎಂದು ಪೊಲೀಸ್