ಐಶ್ವರ್ಯ ಗೌಡ ವಂಚನೆ ಪ್ರಕರಣ; ಡಿಕೆ ಸುರೇಶ್​ಗೆ ಇಡಿಯಿಂದ ಸಮನ್ಸ್ ಜಾರಿ

newsics.com ಬೆಂಗಳೂರು: ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ವಂಚಿಸಿದ ಆರೋಪ ಹೊತ್ತ ಐಶ್ವರ್ಯ ಗೌಡ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾಜಿ ಸಂಸದ ಡಿ.ಕೆ.ಸುರೇಶ್ ಅವರಿಗೆ ಇಡಿ ಸಮನ್ಸ್ ಜಾರಿ ಮಾಡಿದೆ. ಐಶ್ವರ್ಯ ಗೌಡ ಹೇಳಿಕೆ ಹಾಗೂ ಸಾಕ್ಷಿಗಳ ಆಧರಿಸಿ ಮಾಜಿ ಸಂಸದ ಡಿ.ಕೆ.ಸುರೇಶ್​ ಗುರುವಾರ ವಿಚಾರಣೆಗೆ ಹಾಜರಾಗುವಂತೆ ಇಡಿ ತಿಳಿಸಿದೆ. ಐಶ್ವರ್ಯ ಗೌಡ ಜೊತೆಗೆ ಆರ್ಥಿಕ ವ್ಯವಹಾರಗಳ ಅನುಮಾನದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ.