newsics.com
ನವದೆಹಲಿ: ಏರ್ ಇಂಡಿಯಾ ವಿಮಾನಗಳಲ್ಲಿ ತಾಂತ್ರಿಕ ದೋಷಗಳು ಹೆಚ್ಚಾದ ಹಿನ್ನೆಲೆಯಲ್ಲಿ ಏಳು ಅಂತರರಾಷ್ಟ್ರೀಯ ಮತ್ತು ರಾಷ್ಟ್ರೀಯ ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ.
ಜೂನ್ 12 ರಂದು ಅಹಮದಾಬಾದ್‌ನಲ್ಲಿ ದುರ್ಘಟನೆ ನಡೆದ ಬಳಿಕ ಏರ್ ಇಂಡಿಯಾ ತನ್ನ ವಿಮಾನಗಳಲ್ಲಿ ಅದರಲ್ಲೂ ವಿಶೇಷವಾಗಿ ಅದರ ಬೋಯಿಂಗ್ 787 ಡ್ರೀಮ್‌ಲೈನರ್ ಫ್ಲೀಟ್‌ನ ಸುರಕ್ಷತಾ ತಪಾಸಣೆಗಳನ್ನು ಹೆಚ್ಚಿಸಿದೆ.
ದೆಹಲಿ ಮತ್ತು ಮುಂಬೈನಿಂದ ಹೊರಡುವ ವಿಮಾನ ಹಾರಾಟ ರದ್ದು ಮಾಡಲಾಗಿದೆ. ಕೆಲವು ವಿಮಾನಗಳು ಕಾರ್ಯನಿರ್ವಹಿಸುತ್ತಿಲ್ಲ ಎಂದು ಬೇರೆಡೆಗೆ ತಿರುಗಿಸಲಾಗಿದೆ.
ನಮ್ಮ ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗೆ ನಾವು ವಿಷಾದಿಸುತ್ತೇವೆ ಮತ್ತು ಅವರನ್ನು ಆದಷ್ಟು ಬೇಗ ಅವರು ತೆರಳಬೇಕಾದ ಜಾಗಗಳಿಗೆ ಅವರನ್ನು ತಲುಪಿಸಲು ಪರ್ಯಾಯ ವ್ಯವಸ್ಥೆಗಳನ್ನು ಮಾಡುತ್ತಿದ್ದೇವೆ. ನಾವು ಹೋಟೆಲ್ ವಸತಿ ಸೌಕರ್ಯವನ್ನು ಒದಗಿಸುತ್ತಿದ್ದೇವೆ ಎಂದು ಏರ್ ಇಂಡಿಯಾ ತನ್ನ ಹೇಳಿಕೆಯಲ್ಲಿ ತಿಳಿಸಿದೆ.