newsics.com
ಸಂಜು ವೆಡ್ಸ್ ಗೀತಾ 2 ಸಿನಿಮಾದಲ್ಲಿ ಅಭಿನಯಿಸಿದ್ದ ನಟಿ ರಚಿತಾ ರಾಮ್ ವಿರುದ್ಧ ನಿರ್ದೇಶಕ ನಾಗಶೇಖರ್, ನಟ ಶ್ರೀನಗರ ಕಿಟ್ಟಿ ಅವರು ಫಿಲ್ಮ್ ಚೇಂಬರ್‌ಗೆ ದೂರು ಕಂಪ್ಲೇಂಟ್ ಕೊಟ್ಟಿದ್ದಾರೆ.
ಸಂಜು ವೆಡ್ಸ್ ಗೀತಾ 2 ಸಿನಿಮಾ ಪ್ರಚಾರಕ್ಕೆ ರಚಿತಾ ರಾಮ್ ಬಂದಿಲ್ಲ. ಹೀಗಾಗಿ ರಚಿತಾ ರಾಮ್ ವಿರುದ್ಧ ನಿರ್ದೇಶಕರು ತಿರುಗಿ ಬಿದ್ದಿದ್ದಾರೆ. ಸಂಜು ವೆಡ್ಸ್ ಗೀತಾ ಸಿನಿಮಾ ಇಷ್ಟು ದಿನ ಪ್ರದರ್ಶನ ಕಂಡರು ರಚಿತಾ ರಾಮ್ ನಮ್ಮ ಸಿನಿಮಾ ಪ್ರಚಾರಕ್ಕೆ ಒಂಚೂರು ಸಪೋರ್ಟ್ ಕೊಟ್ಟಿಲ್ಲ. ರಾಕ್‌ಲೈನ್ ವೆಂಕಟೇಶ್ ಮನವೊಲಿಸಲು ಪ್ರಯತ್ನಿಸಿದ್ರು. ಆದರೂ ರಚಿತಾ ಒಪ್ಪಿಲ್ಲ. ನಾವು ಇಂತಹ ಕಲಾವಿದರಿಗೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದಿದ್ದಾರೆ.
ನಿರ್ದೇಶಕ ನಾಗಶೇಖರ್, ರಮ್ಯಾ, ತಮನ್ನಾ ಎಲ್ಲರಿಗೂ ನಾನು ಸಿನಿಮಾ ಮಾಡಿದ್ದೀನಿ. ಆದ್ರೆ ಇಂತಹ ಸಮಸ್ಯೆ ಯಾವ ನಟಿಯೂ ಕೊಟ್ಟಿಲ್ಲ ಎಂದಿದ್ದಾರೆ.