Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Tamil Nadu ADGP arrested ಕಿಡ್ನ್ಯಾಪ್ ಕೇಸ್: ತಮಿಳುನಾಡು ಎಡಿಜಿಪಿ ಬಂಧನ
ದೇಶ

Tamil Nadu ADGP arrested ಕಿಡ್ನ್ಯಾಪ್ ಕೇಸ್: ತಮಿಳುನಾಡು ಎಡಿಜಿಪಿ ಬಂಧನ

Share
2 Min Read
SHARE

newsics.com

ಅಪ್ರಾಪ್ತ ಬಾಲಕನ ಅಪಹರಣ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ತಮಿಳುನಾಡಿನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಅವರನ್ನು ಸೋಮವಾರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮದ್ರಾಸ್ ಹೈಕೋರ್ಟ್ ನಿರ್ದೇಶನದ ನಂತರ ಪೊಲೀಸರು ಅವರನ್ನು ಬಂಧಿಸಿದ್ದಾರೆ.

ಬಳಿಕ ತಿರುವಳ್ಳೂರು ಜಿಲ್ಲೆಯ ತಿರುವಲಂಕಡು ಪೊಲೀಸ್​ ಠಾಣೆಗೆ ಕರೆದೊಯ್ಯಲಾಗಿತ್ತು. ಇದಕ್ಕೂ ಮುನ್ನ ಅವರನ್ನು ಜಿಲ್ಲಾ ಮ್ಯಾಜಿಸ್ಟ್ರೇಟ್​ ಕೋರ್ಟ್​ ಮುಂದೆ ಹಾಜರುಪಡಿಸಲಾಗಿತ್ತು.

 

ಈ ಪ್ರಕರಣದಲ್ಲಿ ಬಂಧನಕ್ಕೊಳಗಾಗುವ ಸಾಧ್ಯತೆ ಇದೆ ಎಂದು ಆರೋಪಿಸಿ ಶಾಸಕ ಎಂ.ಜಗನ್ ಮೂರ್ತಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ. ವೇಲ್ಮುರುಗನ್, ಬಂಧನಕ್ಕೆ ನಿರ್ದೇಶನ ನೀಡುವ ಜೊತೆಗೆ ಶಾಸಕರು ಯಾಕೆ ಪೊಲೀಸರಿಂದ ಈ ಪ್ರಕರಣದಲ್ಲಿ ಓಡಿ ಹೋಗುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ. ಹಾಗೆಯೇ ಅಪಹರಣ ಪ್ರಕರಣದಲ್ಲಿ ಪೊಲೀಸರ ತನಿಖೆಗೆ ಸಹಕರಿಸುವಂತೆ ಸೂಚಿಸಿ, ಅವರು ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದರು.

 

ಏನಿದು ಪ್ರಕರಣ?

ತಮಿಳುನಾಡಿನ ತಿರುವಳ್ಳೂರ್ ಜಿಲ್ಲೆಯ ನಾನ್ ಕಾಡು ಪ್ರದೇಶದ ನಿವಾಸಿಯಾದ ತನುಷ್ ಎಂಬಾತನಿಗೆ ತಮಿಳುನಾಡಿನ ತೇಣಿ ಜಿಲ್ಲೆಯ ವಿಜಯಶ್ರೀ ಎಂಬ ಯುವತಿಯೊಂದಿಗೆ ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾಗಿತ್ತು. ನಂತರ ದೂರವಾಣಿ ಸಂಖ್ಯೆ ಎಕ್ಸ್‌ಚೇಂಜ್ ಮಾಡಿಕೊಂಡಿದ್ದು, ಇಬ್ಬರೂ ಫೋನ್‌ನಲ್ಲಿ ದಿನವೂ ಮಾತನಾಡುತ್ತಿದ್ದರು. ಕಾಲಕ್ರಮೇಣ ಈ ಪರಿಚಯ ಪ್ರೇಮವಾಗಿ ಮಾರ್ಪಟ್ಟಿದೆ. ಇತ್ತ ಮಗಳು ವಿಜಯಶ್ರೀಯ ಪ್ರೇಮ ವಿಚಾರ ತಿಳಿದ ಪೋಷಕರು ಆಕೆಯನ್ನು ಬೇರೆಯವರಿಗೆ ಕೊಟ್ಟು ಮದುವೆ ಮಾಡಿಸುವ ಪ್ಲಾನ್ ಮಾಡಿದ್ದಾರೆ.

 

ಈ ವಿಚಾರ ತಿಳಿದ ವಿಜಯಶ್ರೀ ಮನೆಯಿಂದ ಓಡಿ ಹೋಗಿದ್ದಾರೆ. ಇದಾದ ನಂತರ ನಂತರ ವಿಜಯಶ್ರೀ ಸಂಬಂಧಿಕರು ಆಕೆಗಾಗಿ ಹುಡುಕಾಟ ನಡೆಸಿ ಎಲ್ಲೆಡೆ ವಿಚಾರಿಸಿದಾಗ, ಮೇ15ರಂದೇ ತನುಷ್ ಜೊತೆ ವಿಜಯಶ್ರೀ ರಿಜಿಸ್ಟ್ರೇಡ್‌ ಮದುವೆಯಾಗಿ ತಲೆಮರೆಸಿಕೊಂಡಿದ್ದಾರೆ ಎಂಬುದು ತಿಳಿದು ಬಂದಿದೆ. ಇದರಿಂದ ಕುಪಿತಗೊಂಡ ಯುವತಿ ವಿಜಯಶ್ರೀ ಪೋಷಕರು ತಿರುವಾಳಂಗಾಡಿನ ಕಳಪ್ಪಾಕ್ಕಂನಲ್ಲಿರುವ ತನುಷ್ ಮನೆಗೆ ಹೋಗಿದ್ದು, ಅಲ್ಲಿದ್ದ ತನುಷ್‌ನ ತಮ್ಮನನ್ನು ಗಾಡಿಯಲ್ಲಿ ಹಾಕಿಕೊಂಡು ಅಪಹರಿಸಿದ್ದಾರೆ ಎನ್ನಲಾಗಿದೆ. ಈ ಘಟನೆ ಕುರಿತು ತನುಷ್ ತಾಯಿ ಪೊಲೀಸರಿಗೆ ದೂರು ನೀಡಿದ್ದರು.

 

ತನುಷ್ ತಾಯಿ ದೂರು ನೀಡಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ತಿರುವಾಳಂಗಾಡಿನ ಪೊಲೀಸರು ವಿಚಾರಣೆ ನಡೆಸಿ ವಿಜಯಶ್ರೀಯ ತಾಯಿ ವನರಾಜ ಸೇರಿದಂತೆ ಮೂವರನ್ನು ಬಂಧಿಸಿ ಜೈಲಿಗೆ ಅಟ್ಟಿದ್ದಾರೆ. ಇತ್ತ ಈ ಅಪಹರಣದಲ್ಲಿ ಪುರಚಿ ಭಾರತಂ ಪಕ್ಷದ ನಾಯಕ ಹಾಗೂ ಶಾಸಕನೂ ಆಗಿರುವ ಪೂವೈ ಜಗನ್ಮೂರ್ತಿ ಭಾಗಿಯಾಗಿದ್ದಾರೆ ಎಂದು ತಿಳಿದು ಬಂದಿದ್ದು. ಕೆ.ವಿ.ಕುಪ್ಪಂ ಶಾಸಕ ಜಗನ್ಮೂರ್ತಿ ಸೇರಿದಂತೆ ಇತರರ ಮೇಲೆ ಪ್ರಕರಣ ದಾಖಲಾಗಿದೆ.

ಈ ಪ್ರಕರಣ ಸಂಬಂಧ ತಮಿಳುನಾಡು ಸರ್ಕಾರ, ಜಯರಾಮ್​ ಅವರನ್ನು ಮುಂದಿನ ಆದೇಶದವರೆಗೆ ಅಮಾನತು ಮಾಡಿ ಆದೇಶಿಸಿದೆ. ಗೃಹ ಇಲಾಖೆಯ ಈ ಆದೇಶವನ್ನು ಇನ್ನೂ ಸಾರ್ವಜನಿಕಗೊಳಿಸಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

 

 

 

 

 

 

TAGGED:#Kidnap #case#TamilNadu #ADGP #arrested
Share This Article
Facebook Twitter Copy Link Print
Previous Article Sanju Weds Geeta 2 ರಚಿತಾ ರಾಮ್ ವಿರುದ್ಧ ತಿರುಗಿಬಿದ್ದ ನಾಗಶೇಖರ್, ನಟ ಶ್ರೀನಗರ ಕಿಟ್ಟಿ – ಕಾರಣವೇನು?
Next Article ಅಮಾನವೀಯ ಕೃತ್ಯ – ಗಂಡ ಮಾಡಿದ ಸಾಲಕ್ಕೆ ಹೆಂಡತಿಯನ್ನು ಮರಕ್ಕೆ ಕಟ್ಟಿ ಹಾಕಿದ ದುರುಳರು

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?