newsics.com
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಮುಲ್ಲೈ ಮುಗಿಲನ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ. ಬೆಂಗಳೂರು ವಾಣಿಜ್ಯ ತೆರಿಗೆಗಳ ಹೆಚ್ಚುವರಿ ಆಯುಕ್ತ ದರ್ಶನ್ ಎಚ್‌ವಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ.
ಉಡುಪಿ ಜಿಲ್ಲಾಧಿಕಾರಿಯಾಗಿದ್ದ ವಿದ್ಯಾಕುಮಾರಿ ಅವರನ್ನು ವರ್ಗಾವಣೆ ಮಾಡಿದ್ದು, ಇದುವರೆಗೆ ಇ- ಆಡಳಿತ ನಿರ್ದೇಶಕರಾಗಿದ್ದ ಸ್ವರೂಪ ಟಿ.ಕೆ ಅವರನ್ನು ಉಡುಪಿ ಡಿಸಿ ಆಗಿ ನೇಮಿಸಲಾಗಿದೆ.