newsics.com
ಬೆಂಗಳೂರು : ‘ಬಮೂಲ್’ ನೂತನ ಅಧ್ಯಕ್ಷರಾಗಿ ಮಾಜಿ ಸಂಸದ ಡಿ.ಕೆ ಸುರೇಶ್ ಆಯ್ಕೆ ಆಗಿದ್ದಾರೆ.
ಬೆಂಗಳೂರು ಡೇರಿ ವೃತ್ತದಲ್ಲಿರುವ ಕಚೇರಿಯಲ್ಲಿ ಡಿ.ಕೆ. ಸುರೇಶ್ ನಾಮಪತ್ರ ಸಲ್ಲಿಸಿದ್ದು, ನಂತರ ನೂತನ ಅಧ್ಯಕ್ಷರಾಗಿ ಮಾಜಿ ಸಂಸದ ಡಿ.ಕೆ ಸುರೇಶ್ ಆಯ್ಕೆ ಆಗಿದ್ದಾರೆ.
ಇಂದು ಬೆಂಗಳೂರಿನ ಡೈರಿ ಸರ್ಕಲ್ನಲ್ಲಿ ಬಮೂಲ್ನ ಆಡಳಿತ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಉಮೇದುವಾರಿಕೆಯನ್ನು ಸಲ್ಲಿಸಿದೆ. ನಮ್ಮ ಹೈನುಗಾರರ ಬದುಕನ್ನು ಹಸನಾಗಿಸುವ ನಿಟ್ಟಿನಲ್ಲಿ ಈ ಸ್ಥಾನಕ್ಕೆ ಸ್ಪರ್ಧಿಸುತ್ತಿದ್ದೇನೆ. ನಿಮ್ಮೆಲ್ಲರ ಪ್ರೋತ್ಸಾಹ ಹಾಗೂ ಆಶೀರ್ವಾದವಿರಲಿ. ನಾವೆಲ್ಲರೂ ಸೇರಿ ಕ್ಷೀರೋದ್ಯಮದಲ್ಲಿ ಕ್ರಾಂತಿಕಾರಕ ಬದಲಾವಣೆಗಳನ್ನು ತರೋಣ ಎಂದು ಡಿಕೆ ಸುರೇಶ್ ಟ್ವೀಟ್ ಮಾಡಿದ್ದಾರೆ.