newsics.com
ವಿಶಾಖಪಟ್ಟಣ: ನಾಳೆ 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ವಿಶಾಖಪಟ್ಟಣದಲ್ಲಿ ಅದ್ದೂರಿಯಾಗಿ ಯೋಗ ದಿನಾಚರಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಯೋಗ ದಿನಾಚರಣೆಯಲ್ಲಿ ಭಾಗವಹಿಸಲಿದ್ದಾರೆ. ಆರ್.ಕೆ. ಬೀಚ್ ನಿಂದ ಭೋಗಪುರಂವರೆಗೆ 26 ಕಿಲೋಮೀಟರ್ ಉದ್ದದ ಕಾರಿಡಾರ್ ನಲ್ಲಿ ಯೋಗ ದಿನಾಚರಣೆ ನಡೆಯಲಿದ್ದು, ಏಕಕಾಲದಲ್ಲಿ 3 ಲಕ್ಷಕ್ಕೂ ಹೆಚ್ಚು ಜನ ಯೋಗ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ 108 ನಿಮಿಷಗಳ ಕಾಲ ಸೂರ್ಯ ನಮಸ್ಕಾರ ಪ್ರದರ್ಶಿಸಲಾಗುವುದು. ಸುಮಾರು 25000 ಬುಡಕಟ್ಟು ವಿದ್ಯಾರ್ಥಿಗಳು ಸೂರ್ಯ ನಮಸ್ಕಾರ ಮಾಡಲಿದ್ದಾರೆ. ಯೋಗ ದಿನದಂದು ಹೊಸ ವಿಶ್ವ ದಾಖಲೆಗೆ ಆಂಧ್ರ ಸರ್ಕಾರ ಸಜ್ಜಾಗಿದೆ.