newsics.com
ನವದೆಹಲಿ: ಇರಾನ್ ಹಾಗೂ ಇಸ್ರೇಲ್ ನಡುವೆ ಯುದ್ಧದ ಸಂಘರ್ಷ ಮುಂದುವರೆದಿರುವ ಹಿನ್ನೆಲೆಯಲ್ಲಿ ಆಪರೇಷನ್ ಸಿಂಧು ಮೂಲಕ ಇರಾನ್ ನಲ್ಲಿರುವ 500ಕ್ಕೂ ಅಧಿಕ ಭಾರತೀಯರು ಭಾರತಕ್ಕೆ ಮರಳಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ.
ಇಸ್ರೇಲ್ ಜೊತೆಗಿನ ಸಂಘರ್ಷದಿಂದಾಗಿ ಇರಾನ್ ನಲ್ಲಿರುವ ಭಾರತೀಯರನ್ನು ಸ್ಥಳಾಂತರ ಮಾಡುವ ಕಾರ್ಯ ನಡೆಯುತ್ತಿದೆ. ವಿದ್ಯಾರ್ಥಿಗಳು ಸೇರಿದಂತೆ ಹಲವು ಭಾರತೀಯರು ಶುಕ್ರವಾರ ತಡರಾತ್ರಿ ಹಾಗೂ ಶನಿವಾರ ಬೆಳಿಗ್ಗೆ ದೆಹಲಿಗೆ ಆಗಮಿಸಿದ್ದಾರೆ. ಆಪರೇಷನ್ ಸಿಂಧು ವಿಮಾನ ಭಾರತೀಯ ನಾಗರಿಕರನ್ನು ಕರೆತಂದಿದೆ.
ಈವರೆಗೆ ಇರಾನ್ ನಲ್ಲಿರುವ ಒಟ್ಟು 517 ಭಾರತೀಯರು ತಾಯ್ನಾಡಿಗೆ ಮರಳಿದ್ದಾರೆ ಎಂದು ತಿಳಿದುಬಂದಿದೆ.