newsics.com
ಮುಂಬೈನ ದಾದಾ ಸಾಹೇಬ್ ಫಾಲ್ಕೆ ಫಿಲ್ಮ್ ಸಿಟಿಯಲ್ಲಿ ಹಿಂದಿಯ ಜನಪ್ರಿಯ ಧಾರಾವಾಹಿ ಅನುಪಮಾ ಶೂಟಿಂಗ್ ಸೆಟ್ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಸೋಮವಾರ (ಜೂನ್ 23) ಮುಂಜಾನೆ ಈ ಘಟನೆ ಸಂಭವಿಸಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಹೇಳಲಾಗುತ್ತಿದೆ.
ಅಗ್ನಿ ಅವಘಡ ಸಂಭವಿಸಿದಾಗ ಅದೃಷ್ಟವಶಾತ್ ಚಿತ್ರೀಕರಣ ನಡೆಯುತ್ತಿರಲಿಲ್ಲ. ಆದ್ದರಿಂದ ಪ್ರಾಣ ಹಾನಿ ಆಗಿಲ್ಲ. ಬೆಂಕಿ ಹೊತ್ತಿಕೊಂಡಿರುವ ವಿಡಿಯೋ ವೈರಲ್ ಆಗಿದೆ. ‘ಅನುಪಮಾ’ ಶೂಟಿಂಗ್ ಸೆಟ್ ಸಂಪೂರ್ಣ ಭಸ್ಮವಾಗಿದೆ.ಇಡೀ ಸ್ಟುಡಿಯೋಗೆ ಬೆಂಕಿ ಹೊತ್ತಿಕೊಂಡಿರುವ ಭಯಾನಕ ವಿಡಿಯೋ ವೈರಲ್ ಆಗಿದೆ.
ಅನುಪಮಾ’ ಧಾರಾವಾಹಿ ನಿರ್ಮಾಪಕರು ಮತ್ತು ವಾಹಿನಿಯವರು ಸೂಕ್ತ ಭದ್ರತಾ ಕ್ರಮ ತೆಗೆದುಕೊಳ್ಳದೇ ಇರುವುದೇ ಈ ಅವಘಡಕ್ಕೆ ಕಾರಣ ಎಂದು ಆರೋಪಿಸಲಾಗುತ್ತಿದೆ.