newsics.com
ಲೀಡ್ಸ್ ನಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಕೊನೆಯ ದಿನ ಹತ್ತಿರಕ್ಕೆ ಬರುತ್ತಿದ್ದಂತೆ ರೋಚಕ ಘಟ್ಟಕ್ಕೆ ತಲುಪುತ್ತಿದೆ. ಭಾರತ ತಂಡದ ಎರಡೂ ಇನ್ನಿಂಗ್ಸ್ನಲ್ಲೂ ಭರ್ಜರಿ ಬ್ಯಾಟಿಂಗ್ ಪ್ರದರ್ಸನ ತೋರಿದೆ. ಅದರಲ್ಲೂ ಕೆಎಲ್ ರಾಹುಲ್ ಹಾಗೂ ರಿಷಭ್ ಪಂತ್ ಆಂಗ್ಲ ಬೌಲರ್ಗಳನ್ನ ಚೆಂಡಾಡುತ್ತಿದ್ದಾರೆ.
ಮೊದಲ ಇನಿಂಗ್ಸ್ ನಲ್ಲಿ 134 ರನ್ ಸಿಡಿಸಿ ಮಿಂಚಿದ್ದ ರಿಷಬ್ ಪಂತ್ ಎರಡನೇ ಇನಿಂಗ್ಸ್ ನಲ್ಲಿಯೂ ಶತಕ ಗಳಿಸಿದ್ದಾರೆ. ಒಂದೇ ಟೆಸ್ಟ್ ಪಂದ್ಯದಲ್ಲಿ 2 ಶತಕ ಸಿಡಿಸಿದ್ದು, ಟೆಸ್ಟ್ ಕ್ರಿಕೆಟ್ ನಲ್ಲಿ 8 ನೇ ಶತಕ ಗಳಿಸಿದ್ದಾರೆ.
ಲೀಡ್ಸ್ ಟೆಸ್ಟ್ನ ಎರಡನೇ ಇನ್ನಿಂಗ್ಸ್ನಲ್ಲೂ 100 ರನ್ಗಳ ಗಡಿ ಮುಟ್ಟುವ ಮೂಲಕ ಪಂತ್, ಸೆನಾ ರಾಷ್ಟ್ರಗಳಲ್ಲಿ ಟೆಸ್ಟ್ ಪಂದ್ಯದ ಎರಡೂ ಇನ್ನಿಂಗ್ಸ್ಗಳಲ್ಲಿ ಶತಕ ಬಾರಿಸಿದ ಏಷ್ಯಾದ ಮೊದಲ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಇನ್ನಿಂಗ್ಸ್‌ನಲ್ಲಿ ರಿಷಭ್ ಪಂತ್ ಕೇವಲ 130 ಎಸೆತಗಳಲ್ಲಿ ಶತಕ ಪೂರೈಸಿದರು. ಮೊದಲ ಇನ್ನಿಂಗ್ಸ್‌ನಲ್ಲಿ 146 ಎಸೆತಗಳಲ್ಲಿ ಈ ಸಾಧನೆ ಮಾಡಿದ್ದ ಪಂತ್ಗೆ ಟೆಸ್ಟ್ ಕ್ರಿಕೆಟ್‌ನಲ್ಲಿ ಇದು 8 ನೇ ಶತಕವಾಗಿದೆ.
ಭಾರತ ತಂಡ ಮೊದಲ ಇನಿಂಗ್ಸ್ ನಲ್ಲಿ 471 ರನ್ ಗಳಿಸಿದ್ದು, ಇಂಗ್ಲೆಂಡ್ ತಂಡ ಮೊದಲ ಇನಿಂಗ್ಸ್ ನಲ್ಲಿ 465 ರನ್ ಗಳಿಸಿತು. 6 ರನ್ ಗಳ ಇನಿಂಗ್ಸ್ ಮುನ್ನಡೆಯೊಂದಿಗೆ 2ನೇ ಇನಿಂಗ್ಸ್ ನಲ್ಲಿ ಬ್ಯಾಟಿಂಗ್ ಆರಂಭಿಸಿದ ಭಾರತ ತಂಡ 71.3 ಓವರ್ ಗಳಲ್ಲಿ ಮೂರು ವಿಕೆಟ್ ನಷ್ಟಕ್ಕೆ 287 ರನ್ ಗಳಿಸಿದೆ.