newsics.com
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ಮತ್ತು ಇಸ್ರೇಲ್ ಮಧ್ಯೆ ಎಂಟ್ರಿಯಾಗಿ ಕದನ ವಿರಾಮ ಘೋಷಣೆ ಮಾಡಿದ್ದಾರೆ. ಆದರೂ ಮತ್ತೆ ದಾಳಿಗಳು ನಡೆಯುತ್ತಿವೆ. ಇರಾನ್ ಮತ್ತೆ ಇಸ್ರೇಲ್ ಮೇಲೆ ಕ್ಷಿಪಣಿಗಳನ್ನು ಹಾರಿಸಿದೆ. ಟೆಲ್ ಅವೀವ್ ಹೊರತುಪಡಿಸಿ, ಇರಾನ್ ಬೀರ್ ಶೀವಾ ಮೇಲೆ ಕ್ಷಿಪಣಿಗಳ ದಾಳಿ ಮಾಡಿದೆ ಎಂದು ತಿಳಿದುಬಂದಿದೆ.
ಇಸ್ರೇಲ್ ಮತ್ತು ಇರಾನ್ ಮಧ್ಯೆ ತಾತ್ಕಾಲಿಕ ಕದನ ವಿರಾಮವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ ಕೆಲವೇ ನಿಮಿಷಗಳ ನಂತರ ಮತ್ತೆ ಅಟ್ಯಾಕ್ ನಡೆದಿದೆ. ಇರಾನ್ ಇಸ್ರೇಲ್ ಮೇಲೆ ದಾಳಿಗಳನ್ನು ಮುಮದುವರೆಸಿದೆ ಎಂದು ವರದಿಯಾಗಿದೆ.
ಇರಾನ್ ಇಸ್ರೇಲ್ ಮೇಲೆ ಸೀಮಿತ ಸಂಖ್ಯೆಯ ಕ್ಷಿಪಣಿಗಳೊಂದಿಗೆ ದಾಳಿ ಮಾಡಿದೆ. ಇಸ್ರೇಲ್ ಪ್ರಸ್ತುತ ಇರಾನಿನ ಕ್ಷಿಪಣಿಗಳನ್ನು ತಡೆಹಿಡಿಯುತ್ತಿದೆ ಎಂದು ವರದಿಯಾಗಿದೆ. ಟೆಲ್ ಅವೀವ್ನ ಆಕಾಶದಲ್ಲಿಯೂ ಸ್ಫೋಟಗಳ ಶಬ್ದ ಕೇಳಿಬರುತ್ತಿದೆ. ಕದನ ವಿರಾಮಕ್ಕೂ ಮುನ್ನ ಇರಾನ್ ಅಂಕಗಳನ್ನು ಗಳಿಸಲು ಬಯಸುತ್ತದೆ ಎಂದು ಮೂಲಗಳು ತಿಳಿಸಿವೆ.