newsics.com
ಬೆಂಗಳೂರು: ಕರ್ನಾಟಕದಾದ್ಯಂತ ಇಂದಿನಿಂದ ಮುಂಗಾರು ಚುರುಕುಗೊಳ್ಳಲಿದ್ದು, 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜೂನ್ 23ರಿಂದಲೇ ಹಲವೆಡೆ ಮಳೆಯಾಗುತ್ತಿದ್ದು, ಜೂನ್ 30ರವರೆಗೂ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ರಾಮನಗರ, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ವಿಜಯನಗರ, ಮೈಸೂರು, ಮಂಡ್ಯ, ಕೋಲಾರ, ಹಾಸನ, ದಾವಣಗೆರೆ, ಚಿತ್ರದುರ್ಗ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಗದಗ, ಬೀದರ್ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.