ತಿರುವನಂತಪುರಂ: ಕೇರಳದಲ್ಲಿ ಮಳೆಯ ಆರ್ಭಟ ಮುಂದುವರಿದಿದೆ.ರಾಜ್ಯದ 12 ಜಿಲ್ಲೆಗಳಿಗೆ ಭಾರೀ ಮಳೆ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದ ವಯನಾಡು, ಇಡುಕ್ಕಿ, ಪಾಲಕ್ಕಾಡ್, ಮಲಪ್ಪುರಂ ಜಿಲ್ಲೆಗಳಿಗೆ ಬುಧವಾರ ಆರೆಂಜ್ ಅಲರ್ಟ್ ಹಾಗೂ ಪತ್ತನಂತಿಟ್ಟ, ಆಲೆಪ್ಪಿ, ಕೊಟ್ಟಾಯಂ, ಎರ್ನಾಕುಲಂ, ತ್ರಿಶೂರ್, ಕೋಝಿಕ್ಕೋಡ್, ಕಣ್ಣೂರು, ಕಾಸರಗೋಡು ಜಿಲ್ಲೆಗಳಿಗೆ ಗುರುವಾರ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ವೆಲ್ಲರಿಮಲದ ಪುನ್ನಪುಳ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಅಲರ್ಟ್ ಘೋಷಿಸಿದೆ