newsics.com
ಬಾಹ್ಯಾಕಾಶ ಕ್ಷೇತದಲ್ಲಿ ಭಾರತ ಮತ್ತೊಂದು ದೊಡ್ಡ ಹೆಜ್ಜೆಯನ್ನಿಡಲು ಮುನ್ನುಡಿ ಸಿಕ್ಕಾಗಿದೆ. ಅಮೆರಿಕದ ಫ್ಲೋರಿಡಾದಲ್ಲಿರುವ ನಾಸಾ(NASA)ದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಬೆಳಗಿನ ಜಾವ 2:31ಕ್ಕೆ (ಭಾರತೀಯ ಸಮಯ ಮಧ್ಯಾಹ್ನ 12:01) ಗಗನಯಾತ್ರಿಗಳನ್ನು ಹೊತ್ತ ರಾಕೆಟ್ ಉಡಾವಣೆಯಾಗಿದೆ.
ನೌಕೆಯಲ್ಲಿ ಅಮೆರಿಕಾ, ಭಾರತ, ಪೋಲೆಂಡ್, ಹಂಗೇರಿ ದೇಶದ ನಾಲ್ವರು ಗಗನಯಾತ್ರಿಗಳು ಇದ್ದಾರೆ.ಅಮೆರಿಕದ ಕಮಾಂಡರ್ ಪೆಗ್ಗಿ ವಿಟ್ಸನ್ ಈ ಕಾರ್ಯಾಚರಣೆಯ ನೇತೃತ್ವ ವಹಿಸಿದ್ದಾರೆ. ಭಾರತದ IAF ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮಿಷನ್ ಪೈಲಟ್ ಆಗಿ ಮತ್ತು ಹಂಗೇರಿಯನ್ ಗಗನಯಾತ್ರಿ ಟಿಬೋರ್ ಕಾಪು ಮತ್ತು ಪೋಲೆಂಡ್‌ನ ಸ್ಲಾವೋಸ್ಜ್ ಉಜ್ನಾನ್ಸ್ಕಿ-ವಿಸ್ನಿವ್ಸ್ಕಿ ಮಿಷನ್ ತಜ್ಞರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ನಾಲ್ವರು 14 ದಿನಗಳ ಕಾಲ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ 60 ವೈಜ್ಞಾನಿಕ ಪ್ರಯೋಗ ನಡೆಸಲಿದ್ದಾರೆ. ಪ್ರಮುಖವಾಗಿ ಬಾಹ್ಯಾಕಾಶದ ಗುರುತ್ವಾಕರ್ಷಣೆ, ಲೈಫ್, ಬಯೋಲಾಜಿಕಲ್, ಭೂಮಿ ವೀಕ್ಷಣೆ, ಮೆಟಿರಿಯಲ್ ಸೈನ್ಸ್ ಬಗ್ಗೆ ಅಧ್ಯಯನ ಹಾಗೂ ಸಂಶೋಧನೆ ಕೈಗೊಳ್ಳಲಿದ್ದಾರೆ.