newsics.com
ನವದೆಹಲಿ: ಬಹಿರಂಗ ಹೇಳಿಕೆ ನೀಡುವವರನ್ನು ಕರೆದು ಎಚ್ಚರಿಕೆ ನೀಡಿ. ಇಲ್ಲವಾದರೆ ಮುಂದೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ದೆಹಲಿ ಭೇಟಿಯಲ್ಲಿರುವ ಸಿಎಂ ಸಿದ್ದರಾಮಯ್ಯಗೆ ಹೈಕಮಾಂಡ್ ಸೂಚಿಸಿದೆ ಎಂದು ವರದಿಗಳು ತಿಳಿಸಿವೆ.
ಮುಂದೆ ಹೀಗೇ ಆದರೆ ಸಹಿಸಲು ಸಾಧ್ಯವಿಲ್ಲ. ಕರೆದು ಮಾತನಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕಾಂಗ್ರೆಸ್ ಹೈಕಮಾಂಡ್ ಖಡಕ್ ಸಂದೇಶ ರವಾನಿಸಿದೆ ಎಂದು ತಿಳಿದುಬಂದಿದೆ.
ದೆಹಲಿ ಪ್ರವಾಸದಲ್ಲಿರುವ ಸಿದ್ದರಾಮಯ್ಯ ಬುಧವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಇದೇ ವೇಳೆ, ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್ ಹಾಗೂ ಇತರರು ನೀಡಿರುವ ಬಹಿರಂಗ ಹೇಳಿಕೆಗಳ ಬಗ್ಗೆ ಚರ್ಚೆ
ನಡೆದಿದೆ ಎಂದು ವರದಿಯಾಗಿದೆ.
ಬಿ.ಆರ್. ಪಾಟೀಲ್ ಎರಡನೇ ಬಾರಿ ಈ ರೀತಿಯಾದ ಹೇಳಿಕೆ ನೀಡಿದ್ದಾರೆ. ಅವರನ್ನು ಕರೆದು ಮಾತನಾಡಿ. ಮುಂದೆ ಇದೇ ರೀತಿ ಆದರೆ ಸಹಿಸಲು ಸಾಧ್ಯವಿಲ್ಲ. ಇನ್ನೊಮ್ಮೆ ಬಹಿರಂಗ ಹೇಳಿಕೆ ನೀಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕಾಂಗ್ರೆಸ್ ಹೈಕಮಾಂಡ್ ಎಚ್ಚರಿಕೆ ನೀಡಿದೆ ಎಂದು ಮೂಲಗಳು ತಿಳಿಸಿವೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಅವರನ್ನು ದೆಹಲಿಯ ಲೋದಿ ಎಸ್ಟೇಟ್ನಲ್ಲಿರುವ ನಿವಾಸದಲ್ಲಿ ಸಿದ್ದರಾಮಯ್ಯ ಭೇಟಿಯಾದರು. ಸಿಎಂಗೆ ಸಚಿವ ಮಹದೇವಪ್ಪ, ಶಾಸಕ ಅಶೋಕ್ ಪಟ್ಟಣ್ ಸಾಥ್ ನೀಡಿದರು.
ಸರ್ಕಾರದ ಬಗ್ಗೆ ಕಾಂಗ್ರೆಸ್ ಶಾಸಕರಿಂದ ಬಹಿರಂಗ ಹೇಳಿಕೆ ವಿಚಾರವಾಗಿ ಚರ್ಚಿಸಲು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಮುಂದಿನ ವಾರ ಬೆಂಗಳೂರಿಗೆ ಬರಲಿದ್ದಾರೆ.
ರಾಜ್ಯ ನಾಯಕರ ಜತೆ ಸಭೆ ನಡೆಸುವ ರಣದೀಪ್ ಸುರ್ಜೇವಾಲ ಪಕ್ಷದ ಪದಾಧಿಕಾರಿಗಳು, ಮಂತ್ರಿಗಳ ಜತೆ ಪ್ರತ್ಯೇಕ ಸಭೆ ನಡೆಸುವ ಸಾಧ್ಯತೆ ಇದೆ.
ಕಾಂಗ್ರೆಸ್ ಶಾಸಕರ ಬಹಿರಂಗ ಹೇಳಿಕೆಗೆ ಬ್ರೇಕ್ ಹಾಕಲು ಸೂಚನೆ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇನ್ನು, ಎಂಎಲ್ಸಿಗಳ ಪಟ್ಟಿಯಲ್ಲಿ ಹೆಸರು ಬದಲಾವಣೆ ಬಗ್ಗೆಯೂ ಹೈಕಾಂಡ್ ನಾಯಕರ ಜತೆ ಸಿಎಂ ಸಿದ್ದರಾಮಯ್ಯ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ನಾಲ್ಕರಲ್ಲಿ ಒಂದು ಹೆಸರು ಕೈಬಿಡುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದಿದೆ. ರಮೇಶ್ ಬಾಬು ಅಥವಾ ದಿನೇಶ್ ಅಮಿನ್ ಮಟ್ಟು ಹೆಸರು ಕೈಬಿಡುವ ಪ್ರಸ್ತಾಪವಿದೆ ಎನ್ನಲಾಗಿದೆ.
ಎಂಎಲ್ಸಿಗಳ ಪಟ್ಟಿಯಲ್ಲಿ ನೂತನ ಹೆಸರು ಸೇರ್ಪಡೆಗೊಳಿಸಿ ಶೀಘ್ರದಲ್ಲೇ ಪಟ್ಟಿ ರವಾನೆ ಮಾಡುವ ನಿರೀಕ್ಷೆ ಇದೆ. ಈ ವಿಚಾರದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ವಿಶ್ವಾಸಕ್ಕೆ ಪಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
CBSE EXAM 2026 ರಿಂದ ವರ್ಷಕ್ಕೆ 2 ಬಾರಿ 10ನೇ ತರಗತಿಗೆ ಬೋರ್ಡ್ ಪರೀಕ್ಷೆ
ಇನ್ಮುಂದೆ ಎಲ್ಲಾ ಇಲಾಖೆಗಳಲ್ಲಿ ಕನ್ನಡ ಕಡ್ಡಾಯವಾಗಿ ಬಳಸಬೇಕು – ರಾಜ್ಯ ಸರ್ಕಾರದಿಂದ ಸುತ್ತೋಲೆ ಪ್ರಕಟ
Viral ಕಾರಿನ ಸನ್ ರೂಫ್ ತೆರೆದು ರೊಮ್ಯಾನ್ಸ್ ಮಾಡಿದ ಜೋಡಿಗಳು – ವೈರಲ್ ವಿಡಿಯೋ ನೋಡಿ