newsics.com
ಕಲಬುರಗಿ: ನಗರದ ಹೊರವಲಯದ ಪಟ್ಟಣ ಗ್ರಾಮದ ಬಳಿ ಮಂಗಳವಾರ ತಡರಾತ್ರಿ 1:30ರ ಸುಮಾರಿಗೆ ಮೂವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ.
ಸಿದ್ಧಾರೂಢ (32), ಜಗದೀಶ್ (25), ರಾಮಚಂದ್ರ (35) ಕೊಲೆಯಾದವರು. ಈ ಮೂವರು ಸಂಬಂಧಿಕರಾಗಿದ್ದರು.
ಮಂಗಳವಾರ ತಡರಾತ್ರಿ 1.30 ರ ಸುಮಾರಿಗೆ ಡ್ರೈವರ್ ಡಾಬಾಗೆ ನುಗ್ಗಿದ ಹಂತಕರು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.
ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಕಲಬುರಗಿ ಸಬ್ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Young man killed lover ವಿವಾಹಿತ ಪ್ರಿಯತಮೆ ಕೊಂದು ಚಿನ್ನಾಭರಣ ದೋಚಿ ಹೊಲದಲ್ಲಿ ಬಚ್ಚಿಟ್ಟ ಯುವಕ! ಆರೋಪಿ ಬಂಧನ