Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Heart attacks risk increasing in children ಮಕ್ಕಳಲ್ಲಿ ಹೆಚ್ಚುತ್ತಿದೆ ಹೃದಯಾಘಾತ ಸಾಧ್ಯತೆ: ವರದಿ ನೋಡಿ ಅಧ್ಯಯನ ತಂಡವೇ ಶಾಕ್
ಆರೋಗ್ಯಕರ್ನಾಟಕದೇಶಪ್ರಮುಖ

Heart attacks risk increasing in children ಮಕ್ಕಳಲ್ಲಿ ಹೆಚ್ಚುತ್ತಿದೆ ಹೃದಯಾಘಾತ ಸಾಧ್ಯತೆ: ವರದಿ ನೋಡಿ ಅಧ್ಯಯನ ತಂಡವೇ ಶಾಕ್

Share
3 Min Read
SHARE

newsics.com

ಸಣ್ಣ ವಯಸ್ಸಿನಲ್ಲಿಯೇ ಆನೇಕರು ಹೃದಯಾಘಾತದಿಂದ ಇಹಲೋಕ ತ್ಯಜಿಸುತ್ತಿದ್ದಾರೆ. ಅದರಲ್ಲೂ ಮಕ್ಕಳಲ್ಲಿ ಹೃದಯಾಘಾತ ಹೆಚ್ಚಳ ಎಲ್ಲರ ಆತಂಕಕ್ಕೆ ಕಾರಣವಾಗಿದೆ. ಹಾಸನ ಜಿಲ್ಲೆಯಲ್ಲಿ ಕಳೆದೊಂದು ತಿಂಗಳಲ್ಲಿ ಯುವ ವಯಸ್ಸಿನ 15‌ ಮಂದಿ ಅಸುನೀಗಿದ್ದಾರೆ.

ಈ ಬಗ್ಗೆ ಹುಬ್ಬಳ್ಳಿಯ ಕಿಮ್ಸ್ನ (KIMS) ಬಹುಶಿಸ್ತೀಯ ಸಂಶೋಧನಾ ಘಟಕ ಸಂಶೋಧನೆ ನಡೆಸಿದ್ದು, ಬೆಚ್ಚಿಬೀಳಿಸುವ ಅನೇಕ ಅಂಶಗಳು ಬೆಳಕಿಗೆ ಬಂದಿವೆ.

ಮಕ್ಕಳಲ್ಲಿ ಹೃದಯಾಘಾತ ಹೆಚ್ಚಾಗಲು ಅವರು ಅತಿಯಾಗಿ ಮೊಬೈಲ್ ಬಳಸುತ್ತಿರುವುದು ಮತ್ತು ಅವರ ಜೀವನ ಶೈಲಿ, ಆಹಾರ ಅಭ್ಯಾಸಗಳೇ ಪ್ರಮುಖ ಕಾರಣ ಎಂಬುದನ್ನು ತಂಡ ಪತ್ತೆ ಮಾಡಿದೆ.

ಈ ಹಿಂದೆಲ್ಲ 40 ವರ್ಷ ವಯಸ್ಸು ಮೇಲ್ಪಟ್ಟವರಲ್ಲಿ ಹೆಚ್ಚಾಗಿ ಕಾಣಿಸುತ್ತಿದ್ದ ಹೃದಯಾಘಾತ ಇದೀಗ ಮಕ್ಕಳಲ್ಲಿ ಕಂಡುಬರುತ್ತಿರುವದು ಪಾಲಕರ ಆತಂಕಕ್ಕೆ ಕಾರಣವಾಗಿದೆ.

ಮೇಲ್ನೋಟಕ್ಕೆ ಸಾಮಾನ್ಯವಾಗಿ, ಆರೋಗ್ಯವಂತರಾಗಿ ಕಾಣಿಸುವವರು ಕೂಡಾ ದಿಢೀರನೆ ಹೃದಯಾಘಾತಕ್ಕೊಳಗಾಗಿ ಮೃತಪಡುತ್ತಿದ್ದಾರೆ.

ಕಿಮ್ಸ್ ವೈದ್ಯಕೀಯ ಕಾಲೇಜಿನ ಬಹುಶಿಸ್ತೀಯ ಸಂಶೋಧನಾ ತಂಡ, ಮಕ್ಕಳಲ್ಲಿ ಹೃದಯಾಘಾತಕ್ಕೆ ಕಾರಣಗಳೇನು ಎಂಬುದರ ಬಗ್ಗೆ ದೇಶದಲ್ಲಿಯೇ ಮೊದಲ ಬಾರಿಗೆ ಪೈಲಟ್ ಪ್ರಾಜೆಕ್ಟ್ ಆಗಿ, ಸಂಶೋಧನೆ ನಡೆಸಿದೆ.

ಮಕ್ಕಳಲ್ಲಿ ಹೆಚ್ಚಾಗುತ್ತಿರುವ ಹೃದಯಾಘಾತ ಪ್ರಮಾಣ ಸಂಬಂಧ ದೇಶದಲ್ಲಿಯೇ ಮೊದಲ ಬಾರಿಗೆ ಕಿಮ್ಸ್ ಸಂಶೋಧನಾ ತಂಡದಿಂದ ಅಧ್ಯಯನ ನಡೆದಿದೆ.

ಧಾರವಾಡ ತಾಲೂಕಿನ 35 ಕ್ಕೂ ಹೆಚ್ಚು ಖಾಸಗಿ ಹಾಗೂ ಸರ್ಕಾರಿ ಹೈಸ್ಕೂಲ್ಗೆ ಭೇಟಿ ನೀಡಿದ್ದ ತಂಡ, 8 ಮತ್ತು 9ನೇ ತರಗತಿಯಲ್ಲಿ ಓದುತ್ತಿರುವ 30 ಮಕ್ಕಳನ್ನು ಸಂಶೋಧನೆಗೆ ಆಯ್ಕೆ ಮಾಡಿಕೊಂಡಿತ್ತು. ಹೆಚ್ಚು ತೂಕ ಇರುವ ಮಕ್ಕಳನ್ನೇ ಸಂಶೋಧನೆಗೆ ಆಯ್ಕೆ ಮಾಡಿಕೊಂಡು, ಅವರ ಆಹಾರದ ಬಗ್ಗೆ ಅಧ್ಯಯನ ಮಾಡಲಾಗಿತ್ತು. ಅವರು ಮೊಬೈಲ್ ನೋಡುವ ಸಮಯದ ಬಗ್ಗೆ, ದೈಹಿಕ ಚಟುವಟಿಕೆಗಳ ಬಗ್ಗೆ ಅಧ್ಯಯನ ನಡೆಸಿತ್ತು. ನಂತರ ಅವರ ದೈಹಿಕ ಪರೀಕ್ಷೆ ಮಾಡಲಾಗಿತ್ತು. ಲಿಪಿಡ್ ಪ್ರೊಫೈಲ್, ಲೈಪೋ ಪ್ರೊಟೀನ್ ಎ, ಹೋಮೋಸಿಸ್ಟಿನ್, ಹೈಸೆನ್ಸಿಟಿವಿಟಿ ಸಿ ರಿಯಾಕ್ಟೀವ್ ಪ್ರೋಟಿನ್ ರಕ್ತ ಪರೀಕ್ಷೆ, ಜೆನೆಟಿಕ್ ಪರೀಕ್ಷೆ ಸೇರಿದಂತೆ ಅನೇಕ ರೀತಿಯ ರಕ್ತ ಪರೀಕ್ಷೆಗಳನ್ನು ನಡೆಸಿತ್ತು.

ಪರೀಕ್ಷೆಯ ನಂತರ ಬಂದ ವರದಿ ನೋಡಿ, ತಂಡವೇ ಶಾಕ್ ಆಗಿದೆ. ಯಾಕೆಂದರೆ, ಪರೀಕ್ಷೆಗೆ ಒಳಪಟ್ಟಿದ್ದ 30 ಮಕ್ಕಳ ಪೈಕಿ, ಬರೋಬ್ಬರಿ 26 ಮಕ್ಕಳು ಹೃದಯಾಘಾತದ ಅಪಾಯ ಹೊಂದಿರುವುದು ಗೊತ್ತಾಗಿದೆ.

ಸಂಶೋಧನಗೆ ಆಯ್ಕೆ ಮಾಡಿಕೊಂಡ 30 ವಿದ್ಯಾರ್ಥಿಗಳ ಪೈಕಿ ಒಬ್ಬ ವಿದ್ಯಾರ್ಥಿಗೆ ಸಕ್ಕಲೆ ಕಾಯಿಲೆ ಇರುವುದು ಪತ್ತೆಯಾದರೆ, ನಾಲ್ವರು ವಿದ್ಯಾರ್ಥಿಗಳಲ್ಲಿ ಬಿಪಿ ಹೆಚ್ಚಾಗಿತ್ತು. ಐವರು ವಿದ್ಯಾರ್ಥಿಗಳಲ್ಲಿ ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಾಗಿತ್ತು. 11 ವಿದ್ಯಾರ್ಥಿಗಳಲ್ಲಿ ಟ್ರೈಗ್ಲಿಸರೈಡ್ ಹೆಚ್ಚಾಗಿತ್ತು. ಐವರು ವಿದ್ಯಾರ್ಥಿಗಳಲ್ಲಿ ಎಲ್ಡಿಎಲ್ ಕೊಲೆಸ್ಟ್ರಾಲ್ ಹೆಚ್ಚಾಗಿರುವುದು ಕಂಡುಬಂದಿದೆ.

ದೇಹದಲ್ಲಿ ರಕ್ತ ಹೆಪ್ಪುಗಟ್ಟುವ ಪ್ರಮಾಣ ತಿಳಿಸುವ ಹೋಮೋಸಿಸ್ಟಿನ್ ಪ್ರಮಾಣ, 30 ಮಕ್ಕಳ ಪೈಕಿ ಬರೋಬ್ಬರಿ 26 ಮಕ್ಕಳಲ್ಲಿ ಹೆಚ್ಚಾಗಿತ್ತು. ನಾಲ್ಕು ಮಕ್ಕಳಲ್ಲಿ ಲಿಪೋಪ್ರೋಟಿನ್ ಪ್ರಮಾಣ ಹೆಚ್ಚಾಗಿತ್ತು. ಹೈ ಸೆನ್ಸಿಟಿವ್ ಸಿ ರಿಯಾಕ್ಟಿವ್ ಪ್ರೊಟೀನ್ 18 ಮಕ್ಕಳಲ್ಲಿ ಹೆಚ್ಚು ಇರುವುದು ವೈದ್ಯಕೀಯ ಪರೀಕ್ಷೆಗಳಲ್ಲಿ ಕಂಡುಬಂದಿತ್ತು.

ವಿದ್ಯಾರ್ಥಿಗಳಲ್ಲಿ ಬೊಜ್ಜು ಹೆಚ್ಚಿರಲು, ದೈಹಿಕ ಚಟುವಟಿಕೆ ಇಲ್ಲದೇ ಇರುವುದು ಕಾರಣ ಎಂಬುದು ಗೊತ್ತಾಗಿದೆ. ಅವರು ಪ್ರತಿನಿತ್ಯ ಶಾಲೆಗೆ ಹೋಗುವುದು ಹಾಗೂ ಮನೆಗೆ ಹೋಗುವುದಷ್ಟನ್ನೇ ಮಾಡುತ್ತಿದ್ದರು. ಮನೆಯಲ್ಲಾಗಲಿ, ಶಾಲೆಯಲ್ಲಾಗಲಿ ಮಕ್ಕಳು ದೈಹಿಕ ಶ್ರಮದ ಆಟವನ್ನೇ ಆಡುತ್ತಿರಲಿಲ್ಲ. ಪಠ್ಯೇತರ ಚಟುವಟಿಕೆಯಲ್ಲಿ ಭಾಗಿಯಾಗುತ್ತಿರಲಿಲ್ಲ.

ಮಕ್ಕಳು ಪ್ರತಿ ದಿನ ಒಂದು ಗಂಟೆಯಿಂದ ನಾಲ್ಕು ಗಂಟೆವರೆಗೆ ಮೊಬೈಲ್ ನೋಡುತ್ತಿದ್ದರು. ಜತೆಗೆ ಅವರ ಆಹಾರ ಕ್ರಮ ಕೂಡ ಸರಿಯಾಗಿರಲಿಲ್ಲ. ಅಸಹಜತೆ ಕಂಡುಬಂದ ವಿದ್ಯಾರ್ಥಿಗಳ ಪರೀಕ್ಷಾ ವರದಿಯನ್ನು ಅವರ ಹೆತ್ತವರಿಗೆ ಮತ್ತು ಶಾಲೆಯ ಮುಖ್ಯೋಪಾಧ್ಯಾಯರಿಗೆ ಕಳುಹಿಸಿಕೊಡಲಾಗಿದೆ.

ಮಕ್ಕಳಲ್ಲಿ ಹೃದಯಾಘಾತವಾಗುವುದನ್ನು ತಪ್ಪಿಸಬೇಕಾದರೆ ಅವರ ಆಹಾರ ಪದ್ಧತಿ ಬದಲಾಗಲೇಬೇಕಾಗಿದೆ. ಹೆಚ್ಚಿನ ಮಕ್ಕಳು ಜಂಕ್ ಫುಡ್ ತಿನ್ನುವುದು, ಸಾಫ್ಟ್ ಡ್ರಿಂಕ್ಸ್ ಹೆಚ್ಚಾಗಿ ಕುಡಿಯುತ್ತಿದ್ದಾರೆ. ದೈಹಿಕ ಚಟುವಟಿಕೆ ಕಡಿಮೆಯಾಗಿದ್ದು, ಪಠ್ಯದ ಜತೆಗೆ ಆಟಕ್ಕೂ ಹೆಚ್ಚಿನ ಸಮಯ ನೀಡಬೇಕು.

ಒಳ್ಳೆಯ ಜೀವನ ಶೈಲಿ, ಒಳ್ಳೆಯ ಆಹಾರ ಪದ್ಧತಿ ರೂಢಿ ಮಾಡಿಕೊಂಡರೆ ಹೃದಯದ ತೊಂದರೆಯಿಂದ ಪಾರಾಗಬಹುದು ಎಂದು ಹುಬ್ಬಳ್ಳಿ ಕಿಮ್ಸ್ ನ ಬಹುಶೀಸ್ತಿಯ ಸಂಶೋಧನಾ ಘಟಕದ ಮುಖ್ಯಸ್ಥ ಡಾ. ರಾಮ್ ಕವಲಗುಡ್ಡ ಸಲಹೆ ನೀಡಿದ್ದಾರೆ.

ಅಧ್ಯಯನ ವರದಿಯನ್ನು ರಾಜ್ಯ ಸರ್ಕಾರ, ಕೇಂದ್ರ ಸರ್ಕಾರ, ಐಸಿಎಂಆರ್‌ಗೆ ಕಳುಹಿಸಲಾಗಿದೆ.

ಹೃದಯಾಘಾತಕ್ಕೆ 22 ವರ್ಷದ ಯುವತಿ ಬಲಿ

Shubanshu Shukla ಬಾಹ್ಯಾಕಾಶ ತಲುಪಿದ ಮೊದಲನೇ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದ ಶುಭಾಂಶು ಶುಕ್ಲಾ

ಅನುಮಾನಾಸ್ಪದವಾಗಿ ತಾಯಿ ಹುಲಿ, ನಾಲ್ಕು ಮರಿಗಳು ಸಾವು

ಮಕ್ಕಳಿಂದ ಕಿರಿಕಿರಿ: 4 ಕೋಟಿ ಮೌಲ್ಯದ ಆಸ್ತಿ ದೇವಸ್ಥಾನಕ್ಕೆ ದಾನ ನೀಡಿದ ನಿವೃತ್ತ ಸೈನಿಕ!

TAGGED:The risk of heart attacks is increasing in children: Study team shocked after seeing the report
Share This Article
Facebook Twitter Copy Link Print
Previous Article ಆಧಾರ್ ಕಾರ್ಡ್ ಕೇಳಿದ್ದಕ್ಕೆ ಕಂಡಕ್ಟರ್ ಮೇಲೆ ಹಲ್ಲೆ
Next Article Illegal imprisonment ಪತ್ನಿ ಬದುಕಿದ್ದರೂ ಕೊಲೆ ಪಟ್ಟ: 2 ವರ್ಷ ಅಕ್ರಮ ಜೈಲು ವಾಸ, 5 ಕೋಟಿ ಪರಿಹಾರ ಕೋರಿ ಹೈಕೋರ್ಟ್‌ಗೆ ಮೊರೆ

Popular Posts

ನಾಲ್ವರಿಂದ ಯುವತಿ ಮೇಲೆ 10 ತಿಂಗಳು ಗ್ಯಾಂಗ್‌ ರೇಪ್

2 Min Read

ಸ್ನಾನದ ನೀರಿಗೆ ಒಂದು ಚಿಟಿಕೆ ಕರ್ಪೂರ ಸೇರಿಸಿ; ಪ್ರಯೋಜನ ಸಾಕಷ್ಟಿವೆ!

2 Min Read

ಡಿವೋರ್ಸ್​ ಕೋರಿ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಾ ಪೂಂಜಾ-ಸುಮಂತ್

1 Min Read

ರೆಡ್‌ ಝೋನ್‌ಗೆ ಎಂಟ್ರಿ ಕೊಡಲಿದೆ ಜಗತ್ತು, ಜೂನ್‌ನಿಂದ ವಿನಾಶ ಆರಂಭ

3 Min Read

You Might Also Like

ಪ್ರಮುಖಮನರಂಜನೆ

ಸುಚೇಂದ್ರ ಪ್ರಸಾದ್‌ಗೂ ಮುನ್ನ ಮಗಳಿಗಾದ ಅನ್ಯಾಯ ಬಿಚ್ಚಿಟ್ಟ ಪವಿತ್ರಾ ಲೋಕೇಶ್ ತಾಯಿ

3 Min Read
ಕರ್ನಾಟಕಪ್ರಮುಖ

ಬರೀ 11 ಸಾವಿರ ಇದ್ರೆ ಸಾಕು, ಮನೆಗೆ ಬರುತ್ತೆ ಟಾಟಾದ ಹೊಚ್ಚ ಹೊಸ ಇವಿ ಕಾರು!

2 Min Read
ಪ್ರಮುಖಕರ್ನಾಟಕ

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?