Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 53 ಕೋಟಿ ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣ, ಕೆನರಾ ಬ್ಯಾಂಕ್ ಮ್ಯಾನೇಜರ್ ಸೇರಿ ಮೂವರ ಬಂಧನ: ಎಸ್ಪಿ
ಕರ್ನಾಟಕ

53 ಕೋಟಿ ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣ, ಕೆನರಾ ಬ್ಯಾಂಕ್ ಮ್ಯಾನೇಜರ್ ಸೇರಿ ಮೂವರ ಬಂಧನ: ಎಸ್ಪಿ

Share
1 Min Read
SHARE

newsics.com

ವಿಜಯಪುರ: ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದ ಕೆನರಾ ಬ್ಯಾಂಕ್‌ನಲ್ಲಿ ಕಳೆದ ಮೇ 25 ರಂದು ನಡೆದಿದ್ದ ಅಂದಾಜು 53.26 ಕೋಟಿ ರೂ. ಮೌಲ್ಯದ 58.97 ಕೆಜಿ ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಹುಬ್ಬಳಿಯ ಕೆನರಾ ಬ್ಯಾಂಕ್ ಹಿರಿಯ ಮ್ಯಾನೇಜರ್ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಹೇಳಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬ್ಯಾಂಕ್‌ನ ಲಾಕರ್‌ನಲ್ಲಿದ್ದ ಅಂದಾಜು 53.26 ಕೋಟಿ ರೂ. ಮೌಲ್ಯದ 58.97 ಕೆಜಿ (58,976.94 ಗ್ರಾಂ.) ಬಂಗಾರದ ಆಭರಣಗಳು ಹಾಗೂ ನಗದು ಹಣ 5,20,450 ಸೇರಿ ಹೀಗೆ ಒಟ್ಟು 53,31,20,450 ಕೋಟಿ ರೂ. ಮೌಲ್ಯದ ಬಂಗಾರದ ಆಭರಣಗಳು ಹಾಗೂ ನಗದು ಹಣವನ್ನು ಕಳ್ಳತನ ಮಾಡಿ ಪರಾರಿ ಆಗಿದ್ದ ಘಟನೆ ಭೇದಿಸಲು ಪೊಲೀಸ್ ಇಲಾಖೆ ಯಶಸ್ವಿಯಾಗಿದೆ ಎಂದರು.

ಈ ಪ್ರಕರಣದಲ್ಲಿ ಹುಬ್ಬಳ್ಳಿಯ ಕೆನರಾ ಬ್ಯಾಂಕ್‌ನ ಹಿರಿಯ ಮ್ಯಾನೇಜರ್ ವಿಜಯಕುಮಾರ ಮೋಹನರಾದ ಮಿರಿಯಾಲ (41), ಹುಬ್ಬಳ್ಳಿಯ ಖಾಸಗಿ ಉದ್ಯೋಗಿ ಚಂದ್ರಶೇಖರ ಕೋಟಿಲಿಂಗಮ್ ನೆರೆಲ್ಲಾ (38), ಸುನೀಲ ನಂರಸಿಂಹಲು ಮೋಕಾ (40) ಬಂಧಿತ ಆರೋಪಿಗಳಾಗಿದ್ದು, ಈ ಆರೋಪಿಗಳು ವ್ಯವಸ್ಥಿತವಾಗಿ ಸಂಚು ರೂಪಿಸಿ ಬ್ಯಾಂಕಿನಲ್ಲಿದ್ದ ದೊಡ್ಡ ಮೊತ್ತದ ಬಂಗಾರದ ಆಭರಣಗಳನ್ನು ಹಾಗೂ ನಗದು ಹಣವನ್ನು ದೋಚಿಕೊಂಡು ಹೋಗಿದ್ದರು. ಅಲ್ಲದೆ ತನಿಖೆಯ ದಿಕ್ಕು ತಪ್ಪಿಸಲು ಮಾಟ, ಮಂತ್ರದಂತಹ ಹಲವು ಘಟನೆಗಳನ್ನು ಸೃಷ್ಟಿಸಲಾಗಿತ್ತು ಎಂದರು.

ಇನ್ನು ಆರೋಪಿತರಿಂದ ಕೃತ್ಯಕ್ಕೆ ಬಳಸಿದ 2 ಕಾರುಗಳು ಹಾಗೂ ಕಾರುಗಳಲ್ಲಿ ಸಾಗಾಟ ಮಾಡುತ್ತಿದ್ದ ಅಂದಾಜು 10.75 ಕೋಟಿ ರೂ. ಮೌಲ್ಯದ 10.5 ಕೆಜಿ ಬಂಗಾರದ ಆಭರಣ ಹಾಗೂ ಆಭರಣ ಕರಗಿಸಿದ ಬಂಗಾರದ ಗಟ್ಟಿಗಳನ್ನು ವಶಪಡಿಸಿಕೊಂಡಿದ್ದು, ಇನ್ನಿತರ ಆರೋಪಿಗಳ ಬಂಧನ ಹಾಗೂ ಕಳ್ಳತನವಾದ ವಸ್ತುಗಳ ಪತ್ತೆ ಕಾರ್ಯಾಚರಣೆ ನಡೆಯುತ್ತಿದೆ ಎಂದರು.

TAGGED:#arrested #including #CanaraBank #manager #SP
Share This Article
Facebook Twitter Copy Link Print
Previous Article ಹೃದಯಾಘಾತಕ್ಕೆ 22 ವರ್ಷದ ಯುವತಿ ಬಲಿ
Next Article ಸುಂಟಿಕೊಪ್ಪ ಬಳಿಯ ತೋಟದಲ್ಲಿ ಕಾಡಾನೆ ಕಳೇಬರ ಪತ್ತೆ

Popular Posts

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

You Might Also Like

ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read
ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?