newsics.com
ಜುಲೈ 2 ರಿಂದ ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಪಂದ್ಯ ಬರ್ಮಿಂಗ್ಹ್ಯಾಮ್ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆಯಲಿದೆ.
ಸುದರ್ಶನ್ ಎಡ್ಜ್‌ಬಾಸ್ಟನ್ ಟೆಸ್ಟ್ ಪಂದ್ಯದಲ್ಲಿ ಆಡುವುದು ಕಷ್ಟಕರ ಎಂದು ಹೇಳಲಾಗುತ್ತಿದೆ. ಲೀಡ್ಸ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಸುದರ್ಶನ್ ಭುಜದ ಗಾಯಕ್ಕೆ ಒಳಗಾಗಿದ್ದರು. ಪ್ರಸ್ತುತ ಸಾಯಿ ಸುದರ್ಶನ್ ಗಾಯದ ಬಗ್ಗೆ ಬಿಸಿಸಿಐನಿಂದ ಯಾವುದೇ ಮಾಹಿತಿ ಬಂದಿಲ್ಲ.
ಲೀಡ್ಸ್‌ನಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ ಮೊದಲ ಟೆಸ್ಟ್ ಪಂದ್ಯದೊಂದಿಗೆ ಸಾಯಿ ಸುದರ್ಶನ್ ಟೆಸ್ಟ್ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ್ದರು. ಆದಗ್ಯೂ ತಮ್ಮ ಚೊಚ್ಚಲ ಇನ್ನಿಂಗ್ಸ್‌ನಲ್ಲಿ ಶೂನ್ಯಕ್ಕೆ ಔಟಾಗಿದ್ದರು. ನಂತರ ಎರಡನೇ ಇನ್ನಿಂಗ್ಸ್‌ನಲ್ಲಿ ಕೇವಲ 30 ರನ್‌ಗಳಿಸಿ ನಿರಾಸೆ ಮೂಡಿಸಿದರು. ಅವರು ಎರಡನೇ ಟೆಸ್ಟ್ ಆಡದಿದ್ದರೆ ಅವರ ಸ್ಥಾನದಲ್ಲಿ ಧ್ರುವ್ ಜುರೆಲ್ ಅಥವಾ ನಿತೀಶ್ ಕುಮಾರ್ ರೆಡ್ಡಿ ಪ್ಲೇಯಿಂಗ್-11ನಲ್ಲಿ ಸೇರಿಕೊಳ್ಳಬಹುದು. ಕರುಣ್ ನಾಯರ್ ಮೂರನೇ ಸ್ಥಾನದಲ್ಲಿ ಬ್ಯಾಟಿಂಗ್ ಬರಬಹುದು.