newsics.com
ಕೊಡಗು : ಕರ್ನಾಟಕದಾದ್ಯಂತ ಇಂದು ಭಾರಿ ಮಳೆಯಾಗುವ ಮುನ್ಸೂಚನೆ ದೊರೆತಿದೆ. ಜುಲೈ 3 ರ ವರೆಗೆ ವ್ಯಾಪಕ ಮಳೆ ಬೀಳಲಿದೆ ಎಂದು ಹವಾಮಾನ ಮುನ್ಸೂಚನೆ ದೊರೆತಿದೆ.
ಕೊಡಗು ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ ಎನ್ನಲಾಗಿದೆ.
ಇನ್ನು, ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಜಿಲ್ಲೆಯಲ್ಲಿ ಮಳೆ ಅಬ್ಬರ ಮುಂದುವರಿದ ಹಿನ್ನೆಲೆ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ರಜೆ ನೀಡಲಾಗಿದೆ.
Actress Shefali passes away ‘ಬೋರ್ಡು ಇರದ ಬಸ್ಸನು’ ಹಾಡಿನ ನಟಿ ಶೆಫಾಲಿ ಜರಿವಾಲಾ ಇನ್ನಿಲ್ಲ