Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಡಿ.31ರವರೆಗೆ ಹೊಸ ಜಿಲ್ಲೆ ಮತ್ತು ತಾಲೂಕು ರಚನೆಗೆ ಗಡುವು ನೀಡಿದ ಕೇಂದ್ರ
ಕರ್ನಾಟಕಪ್ರಮುಖ

ಡಿ.31ರವರೆಗೆ ಹೊಸ ಜಿಲ್ಲೆ ಮತ್ತು ತಾಲೂಕು ರಚನೆಗೆ ಗಡುವು ನೀಡಿದ ಕೇಂದ್ರ

Share
1 Min Read
SHARE

newsics.com

ನವದೆಹಲಿ: ‘ಜನಗಣತಿ 2026ರ ಏ.1ರಿಂದ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ, ಅದಕ್ಕಿಂತ 3 ತಿಂಗಳ ಮೊದಲೇ ಜಿಲ್ಲೆ, ಉಪಜಿಲ್ಲೆ, ತಾಲೂಕು, ತೆಹಸಿಲ್, ಪೊಲೀಸ್ ಠಾಣೆಗಳಂತಹ ಆಡಳಿತ ಘಟಕಗಳ ಗಡಿಗಳನ್ನು ಅಂತಿಮಗೊಳಿಸಲಾಗುತ್ತದೆ.

ಹೀಗಾಗಿ ಹೊಸ ಜಿಲ್ಲೆ/ತಾಲೂಕು ರಚನೆ ಸೇರಿದಂತೆ ಗಡಿಗಳಿಗೆ ಸಂಬಂಧಿಸಿದ ಯಾವುದೇ ಪ್ರಸ್ತಾವಿತ ಬದಲಾವಣೆಗಳಿದ್ದರೆ ಡಿ.31ರ ಒಳಗೆ ಮುಗಿಸಿಕೊಳ್ಳಿ’ ಎಂದು ರಾಜ್ಯಗಳಿಗೆ ಕೇಂದ್ರ ಸರ್ಕಾರ ನಿರ್ದೇಶಿಸಿದೆ.
ಇದರಿಂದಾಗಿ ಹೊಸ ತಾಲೂಕು ಹಾಗೂ ಜಿಲ್ಲೆ ರಚನೆ ಮಾಡುವುದಿದ್ದರೆ ಡಿ.31ರೊಳಗೆ ಮಾಡಬೇಕು. ನಂತರ ಯಾವುದೇ ಹೊಸ ತಾಲೂಕು ಹಾಗೂ ಜಿಲ್ಲೆ ರಚನೆ ಮಾಡುವಂತಿಲ್ಲ ಎಂದು ಕೇಂದ್ರ ಸೂಚಿಸಿದಂತಾಗಿದೆ.

ಗಣತಿ ಪ್ರಕ್ರಿಯೆ ಮುಗಿವವರೆಗೆ ಈ ಸೂಚನೆ ಇದು ಜಾರಿಯಲ್ಲಿರುತ್ತದೆ. ಕರ್ನಾಟಕದಲ್ಲಿ ತುಮಕೂರು ಜಿಲ್ಲೆಯನ್ನು 3 ಭಾಗ ಹಾಗೂ ಬೆಳಗಾವಿಯನ್ನು 2 ಭಾಗ ಮಾಡಬೇಕು ಎಂಬ ಬೇಡಿಕೆ ಇರುವ ನಡುವೆಯೇ ಕೇಂದ್ರ ಸರ್ಕಾರದ ಈ ಸೂಚನೆ ಮಹತ್ವ ಪಡೆದಿದೆ.

ಕೇಂದ್ರದ ಸೂಚನೆ ಏನು?:
ಜನಗಣತಿ ಸಂಬಂಧ ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಜನಗಣತಿ ಆಯುಕ್ತ ಹಾಗೂ ರಿಜಿಸ್ಟ್ರಾರ್ ಜನರಲ್ ಮೃತ್ಯುಂಜಯ ಕುಮಾರ್ ನಾರಾಯಣ್ ಪತ್ರ ಬರೆದಿದ್ದು, ‘ಜನಗಣತಿಗಾಗಿ, ಎಲ್ಲಾ ಹಳ್ಳಿ ಮತ್ತು ಪಟ್ಟಣಗಳನ್ನು ಏಕರೂಪದ ಬ್ಲಾಕ್‌ಗಳಾಗಿ ವಿಂಗಡಿಸಲಾಗಿದೆ.
ಬ್ಲಾಕ್‌ಗಳನ್ನು ಅಂತಿಮಗೊಳಿಸಿದ ನಂತರ, ಗಡಿಗಳಿಗೆ ಸಂಬಂಧಿಸಿದ ಯಾವುದೇ ಬದಲಾವಣೆ ಮಾಡಲು ಸಾಧ್ಯವಾಗುವುದಿಲ್ಲ. ಜಿಲ್ಲೆ, ಉಪಜಿಲ್ಲೆ, ತಾಲೂಕು ಮತ್ತು ಪೊಲೀಸ್ ಠಾಣೆಗಳಂತಹ ಆಡಳಿತ ಘಟಕಗಳ ಗಡಿಗಳನ್ನು ಅಂತಿಮಗೊಳಿಸಿದ 3 ತಿಂಗಳ ನಂತರವೇ ಜನಗಣತಿ ನಡೆಸಬಹುದು. ಗಣತಿಯನ್ನು ಏ.1ರಿಂದ ಆರಂಭಿಸಲಾಗುತ್ತದೆ. ಹಾಗಾಗಿ ಡಿ.31ಕ್ಕೂ ಮೊದಲೇ ಗಡಿಗಳಿಗೆ ಸಂಬಂಧಿಸಿದ ಯಾವುದೇ ಪ್ರಸ್ತಾವಿತ ಬದಲಾವಣೆಗಳಿದ್ದರೆ ಮಾಡಿಕೊಳ್ಳಬೇಕು’ ಎಂದು ನಿರ್ದೇಶಿಸಿದ್ದಾರೆ.

  • ಜನಗಣತಿ 2026ರ ಏ.1ರಿಂದ ಆರಂಭವಾಗುತ್ತಿರುವ ಹಿನ್ನೆಲೆ
  • 3 ತಿಂಗಳ ಮೊದಲೇ ಜಿಲ್ಲೆ, ಉಪಜಿಲ್ಲೆ, ತಾಲೂಕು, ತೆಹಸಿಲ್, ಪೊಲೀಸ್ ಠಾಣೆಗಳಂತಹ ಆಡಳಿತ ಘಟಕಗಳ ಗಡಿಗಳನ್ನು ಅಂತಿಮಗೊಳಿಸಲಾಗುತ್ತದೆ
  • ಹೊಸ ಜಿಲ್ಲೆ/ತಾಲೂಕು ರಚನೆ ಸೇರಿದಂತೆ ಗಡಿಗಳಿಗೆ ಸಂಬಂಧಿಸಿದ ಯಾವುದೇ ಪ್ರಸ್ತಾವಿತ ಬದಲಾವಣೆಗಳಿದ್ದರೆ ಡಿ.31ರ ಒಳಗೆ ಮುಗಿಸಿಕೊಳ್ಳಿ
  • ರಾಜ್ಯಗಳಿಗೆ ಕೇಂದ್ರ ಸರ್ಕಾರ ನಿರ್ದೇಶನ

Shefali Jariwala ನಟಿ ಶೆಫಾಲಿ ಜರಿವಾಲ ಸಾವಿನ ಹಿಂದಿನ ರಹಸ್ಯ ಬಿಚ್ಚಿಟ್ಟ ವೈದ್ಯರು

TAGGED:The Center has given a deadline of December 31 for the formation of new districts and taluks.
Share This Article
Facebook Twitter Copy Link Print
Previous Article Shefali Jariwala ನಟಿ ಶೆಫಾಲಿ ಜರಿವಾಲ ಸಾವಿನ ಹಿಂದಿನ ರಹಸ್ಯ ಬಿಚ್ಚಿಟ್ಟ ವೈದ್ಯರು
Next Article Karnataka Rains: ಜುಲೈ 3ರಿಂದ ರಾಜ್ಯದಲ್ಲಿ ಮಳೆ ಅಬ್ಬರ ಹೆಚ್ಚಳ: ಕರ್ನಾಟಕದ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ!

Popular Posts

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

You Might Also Like

ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?