ಭೀಕರ ರಸ್ತೆ ಅಪಘಾತಕ್ಕೆ ನಾಲ್ವರು ಬಲಿ; ಚೆಲ್ಲಾಪಿಲ್ಲಿಯಾಗಿ ಬಿದ್ದ ಮೃತದೇಹಗಳು.!

newsics.com ಬೆಂಗಳೂರು: ನಿಯಂತ್ರಣ ತಪ್ಪಿ ಇನೋವಾ ಕಾರು ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ನಾಲ್ವರು ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಮಾಕಳಿಯಲ್ಲಿ ಈ ಭೀಕರ ಅಪಘಾತ ಸಂಭವಿಸಿದ್ದು, ಅಪಘಾತದ ರಭಸಕ್ಕೆ ಮೃತದೇಹಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ದೊಡ್ಡಬಳ್ಳಾಪುರದ ಮಾಕಾಳಿಯಲ್ಲಿ ನಡೆದಿದ್ದು, ಇನ್ನೋವ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಅಪಘಾತದ ರಭಸಕ್ಕೆ ನಾಲ್ವರ ದೇಹಗಳು ನಾನಾ ಕಡೆ ಬಿದ್ದಿರುವ ಸನ್ನಿವೇಶ ಕಂಡು ಬಂದಿದೆ. ಸ್ಥಳಕ್ಕೆ ಸ್ಥಳೀಯ ಪೊಲೀಸರು ಆಗಮಿಸಿದ್ದು, ಶವಗಳನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ. … Continue reading ಭೀಕರ ರಸ್ತೆ ಅಪಘಾತಕ್ಕೆ ನಾಲ್ವರು ಬಲಿ; ಚೆಲ್ಲಾಪಿಲ್ಲಿಯಾಗಿ ಬಿದ್ದ ಮೃತದೇಹಗಳು.!