newsics.com
ಮಂಡ್ಯ: ರೈತರ ಜೀವನಾಡಿಯಾದ ಕೃಷ್ಣರಾಜಸಾಗರ ಜಲಾಶಯವು 93 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಜೂನ್ ತಿಂಗಳಲ್ಲೇ ಭರ್ತಿಯಾಗಿದ್ದು, ಹೊಸ ದಾಖಲೆ ಸೃಷ್ಟಿಸಿದೆ.
ಕೆಆರ್‌ಎಸ್ ಅಣೆಕಟ್ಟೆ ಜೂನ್ ತಿಂಗಳಲ್ಲೇ ಭರ್ತಿಯಾಗಿರುವ ಸಂಭ್ರಮದ ಅಂಗವಾಗಿ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿಗೆ ಬಾಗಿನ ಅರ್ಪಿಸುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ.
ಕೆಆರ್‌ಎಸ್ ಡ್ಯಾಂ ಜುಲೈ ಅಥವಾ ಆಗಸ್ಟ್ ತಿಂಗಳಲ್ಲಿ ಭರ್ತಿಯಾಗುತ್ತದೆ. ನಂತರ ಮುಖ್ಯಮಂತ್ರಿಗಳಿಂದ ಬಾಗಿನ ಅರ್ಪಿಸಲಾಗುತ್ತದೆ. ಆದರೆ ಈ ವರ್ಷ ಜೂನ್ ಕೊನೆಯ ವಾರದಲ್ಲೇ ಡ್ಯಾಂ ಭರ್ತಿಯಾಗಿದ್ದು, ಸಿಎಂ ಸಿದ್ದರಾಮಯ್ಯ ಅವರು ಜೂನ್ ತಿಂಗಳಿನಲ್ಲಿಯೇ ಬಾಗಿನ ಅರ್ಪಿಸಿದ್ದಾರೆ. ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾಖಲೆ ನಿರ್ಮಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈಗಾಗಲೇ 2013, 2014, 2024 ಈ ಮೂರು ವರ್ಷ ಕಾವೇರಿ ನದಿಗೆ ಬಾಗಿನ ಅರ್ಪಿಸಿ, ಪೂಜೆ ಸಲ್ಲಿಸಿದ್ದರು.
Shraddha Srinath ಹಾಟ್ ಹಾಟ್ ಫೋಟೋಶೂಟ್ ಮಾಡಿ ಪಡ್ಡೆ ಹುಡುಗರ ನಿದ್ದೆಕದ್ದ ಶ್ರದ್ಧಾ ಶ್ರೀನಾಥ್
ತಾಯಿ ಜತೆ ಅನೈತಿಕ ಸಂಬಂಧ: ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿದ ಮಕ್ಕಳು