Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಲಿವ್ ಇನ್ ಸಂಗಾತಿ ಆಶಾ ಶವವನ್ನು ಸ್ಕೂಟರ್‌ನಲ್ಲಿಟ್ಟುಕೊಂಡು 3 ಗಂಟೆ ಕಾಲ ಸುತ್ತಾಡಿದ್ದ ಆರೋಪಿ!
ಕರ್ನಾಟಕಪ್ರಮುಖ

ಲಿವ್ ಇನ್ ಸಂಗಾತಿ ಆಶಾ ಶವವನ್ನು ಸ್ಕೂಟರ್‌ನಲ್ಲಿಟ್ಟುಕೊಂಡು 3 ಗಂಟೆ ಕಾಲ ಸುತ್ತಾಡಿದ್ದ ಆರೋಪಿ!

Share
2 Min Read
SHARE

newsics.com

ಬೆಂಗಳೂರು: ತನ್ನ ಲಿವ್ ಇನ್ ಸಂಗಾತಿಯನ್ನು ಕೊಂದ ಶಂಶುದ್ದೀನ್ ಬಳಿಕ ಶವವನ್ನು ಬಿಬಿಎಂಪಿ ಕಸದ ಲಾರಿಗೆ ಹಾಕುವ ಮುನ್ನ ಸ್ಕೂಟರ್‌ನಲ್ಲಿಟ್ಟುಕೊಂಡು ಮೂರು ಗಂಟೆ ಕಾಲ ನಗರದ ವಿವಿಧೆಡೆ ಸುತ್ತಾಡಿದ್ದ ವಿಚಾರ ಪೊಲೀಸ್ ವಿಚಾರಣೆ ವೇಳೆ ಬಹಿರಂಗವಾಗಿದೆ.

ಕೊಲೆ ಪ್ರಕರಣದ ರಹಸ್ಯವನ್ನು ಭೇದಿಸಿರುವ ಸಿ.ಕೆ. ಅಚ್ಚುಕಟ್ಟು ಠಾಣೆ ಪೊಲೀಸರು, ಮಹಿಳೆಯನ್ನು ಕೊಲೆಗೈದಿದ್ದ ಅಸ್ಸಾಂ ಮೂಲದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಶಂಶುದ್ದೀನ್‌ (32) ಬಂಧಿತ ಆರೋಪಿ.

ಜೂ.28ರಂದು ರಾತ್ರಿ ತನ್ನ ಜತೆ ಸಹಜೀವನ ನಡೆಸುತ್ತಿದ್ದ ಆಶಾ ಅಲಿಯಾಸ್‌ ಪುಷ್ಪಾ (33) ಅವರನ್ನು ಕೊಲೆಗೈದಿದ್ದ. ಮೃತದೇಹವನ್ನು ಪ್ಲಾಸ್ಟಿಕ್‌ ಚೀಲದಲ್ಲಿ ಕಟ್ಟಿ ಸಿ.ಕೆ. ಅಚ್ಚುಕಟ್ಟು ಸ್ಕೇಟಿಂಗ್‌ ಮೈದಾನ ಬಳಿ ನಿಲ್ಲಿಸಿದ್ದ ಬಿಬಿಎಂಪಿ ಕಸದ ಲಾರಿಗೆ ಎಸೆದು ಪರಾರಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ನನ್ನೊಟ್ಟಿಗೆ ಕಳೆದ ಆರು ತಿಂಗಳಿಂದ ಸಹಜೀವನ ನಡೆಸುತ್ತಿದ್ದ ಆಶಾ, ಮದ್ಯ ಸೇವಿಸಿ ಗಲಾಟೆ ಮಾಡುತ್ತಿದ್ದಳು. ಮತ್ತೊಬ್ಬ ವ್ಯಕ್ತಿ ಜತೆ ಗಂಟೆಗಟ್ಟಲೆ ಮೊಬೈಲ್‌ನಲ್ಲಿ ಮಾತನಾಡುತ್ತಿದ್ದಳು. ಇದರಿಂದ ಬೇಸತ್ತು ಕೊಲೆ ಮಾಡಿದೆ ಎಂದು ಪ್ರಾಥಮಿಕ ವಿಚಾರಣೆ ವೇಳೆ ಆರೋಪಿ ಶಂಶುದ್ದೀನ್‌ ತಪ್ಪೊಪ್ಪಿಕೊಂಡಿದ್ದಾನೆ.

ಆರೋಪಿಯನ್ನು ನಾಲ್ಕು ದಿನ ಕಸ್ಟಡಿಗೆ ಪಡೆದು ಹೆಚ್ಚಿನ ತನಿಖೆ ಮುಂದುವರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಕೇಟಿಂಗ್‌ ಮೈದಾನದ ಸಮೀಪ ನಿಲ್ಲಿಸಿದ್ದ ಕಸದ ಲಾರಿಯಲ್ಲಿ ದೊಡ್ಡ ಪ್ಲಾಸ್ಟಿಕ್‌ ಚೀಲ ಗಮನಿಸಿದ್ದ ಸ್ಥಳೀಯರೊಬ್ಬರು, ಕಂಟ್ರೋಲ್‌ ರೂಂಗೆ ಕರೆ ಮಾಡಿ ಮಾಹಿತಿ ನೀಡಿದ್ದರು. ಸ್ಥಳಕ್ಕೆ ತೆರಳಿ ಅನುಮಾನದ ಮೇರೆಗೆ ಚೀಲ ಬಿಚ್ಚಿದಾಗ ಮಹಿಳೆಯ ಮೃತದೇಹ ಪತ್ತೆಯಾಗಿತ್ತು. ಆರಂಭದಲ್ಲಿ ಕೊಲೆಯಾದ ಮಹಿಳೆ ಯಾರು ಎಂಬುದು ಗೊತ್ತಾಗಿರಲಿಲ್ಲ. ಗುರುತು ಪತ್ತೆಗೆ ತನಿಖೆ ನಡೆಸಿದ ಬಳಿಕ ಮೃತ ಮಹಿಳೆ ಧರಿಸಿದ್ದ ಟೀ ಶರ್ಟ್‌ನಲ್ಲಿ ಏಜೆನ್ಸಿಯೊಂದರ ಹೆಸರಿತ್ತು. ಈ ಸುಳಿವು ಆಧರಿಸಿ ಹೆಚ್ಚಿನ ಮಾಹಿತಿ ಶೋಧಿಸಿದಾಗ ಮೃತ ಮಹಿಳೆ ಕೊತ್ತನೂರು ದಿಣ್ಣೆಯ ಆಶಾ ಎಂಬುದು ದೃಢಪಟ್ಟಿತು.

ಹುಳಿಮಾವು ಸಮೀಪದ ಖಾಸಗಿ ಕಂಪನಿಯಲ್ಲಿ ಹೌಸ್‌ಕೀಪಿಂಗ್‌ ಕೆಲಸ ಮಾಡಿಕೊಂಡಿದ್ದ ಆಶಾ, ಶಂಶುದ್ದೀನ್‌ ಜತೆ ಸಹಜೀವನ ನಡೆಸುತ್ತಿರುವ ಮಾಹಿತಿ ಸಿಕ್ಕಿತ್ತು ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೊಲೆಯಾದ ಮಹಿಳೆ ಆಶಾ ಎಂಬುದು ದೃಢಪಡುತ್ತಿದ್ದಂತೆ ಶಂಶುದ್ದೀನ್‌ ಮೇಲೆ ಅನುಮಾನ ಶುರುವಾಗಿತ್ತು. ಜತೆಗೆ, ಘಟನಾ ಸ್ಥಳದ ಸುತ್ತಮುತ್ತಲ ಪ್ರದೇಶಗಳಲ್ಲಿನ ಸಿಸಿಟಿವಿ ಪರಿಶೀಲಿಸಿದ ಬಳಿಕ ದ್ವಿಚಕ್ರವಾಹನದಲ್ಲಿ ಚೀಲ ತಂದು ಕಸದ ಲಾರಿಗೆ ಎಸೆದು ಹೋಗುತ್ತಿರುವ ದೃಶ್ಯ ಸಿಕ್ಕಿತ್ತು.

ಇದರ ಜಾಡು ಹಿಡಿದು ಸಿ.ಕೆ. ಅಚ್ಚುಕಟ್ಟು, ಜಯನಗರ ಸೇರಿದಂತೆ ಪ್ರಮುಖ ಸಿಗ್ನಲ್‌ಗಳಲ್ಲಿನ 100ಕ್ಕೂ ಹೆಚ್ಚು ಸಿಸಿಟಿವಿ ಪರಿಶೀಲಿಸಿ ದ್ವಿಚಕ್ರ ವಾಹನ ಸಾಗಿರುವ ಮಾರ್ಗ ಭೇದಿಸಿ ಶಂಶುದ್ದೀನ್‌ ಕೆಲಸ ಮಾಡುತ್ತಿದ್ದ ಕಚೇರಿಯನ್ನು ಪತ್ತೆಹಚ್ಚಲಾಗಿತ್ತು.

ಬಳಿಕ ಆತ ಕೆಲಸ ಮಾಡುತ್ತಿದ್ದ ಸ್ಥಳದಲ್ಲಿಯೇ ಬಂಧಿಸಿ ವಿಚಾರಣೆ ನಡೆಸಿದಾಗ ಆಶಾ ಅವರನ್ನು ಕೊಂದು ಮೃತದೇಹ ಎಸೆದಿದ್ದ ಸತ್ಯ ಬಾಯ್ಬಿಟ್ಟಿದ್ದ ಎಂದು ಅಧಿಕಾರಿ ಹೇಳಿದರು.
ಕೊತ್ತನೂರು ದಿಣ್ಣೆ ನಿವಾಸಿ ಆಶಾ ಅವರ ಪತಿ ಕೆಲ ವರ್ಷಗಳ ಹಿಂದೆ ತೀರಿಕೊಂಡಿದ್ದರು. ಅವರಿಗೆ ಮಕ್ಕಳಿರಲಿಲ್ಲ.

ವಿಧವೆಯಾದ ಆಶಾ, ಹುಳಿಮಾವಿನ ಖಾಸಗಿ ಕಂಪನಿಯಲ್ಲಿ ಏಜೆನ್ಸಿ ಮುಖಾಂತರ ಹೌಸ್‌ಕೀಪಿಂಗ್‌ ಕೆಲಸ ಮಾಡುತ್ತಿದ್ದರು. ಅದೇ ಕಂಪನಿಯಲ್ಲಿ ಹೌಸ್‌ಕೀಪರ್‌ ಆಗಿದ್ದ ಶಂಶುದ್ದೀನ್‌ ಪರಿಚಯವಾಗಿ ಪ್ರೀತಿಗೆ ತಿರುಗಿತ್ತು. ಇಬ್ಬರೂ ಒಟ್ಟಿಗೆ ಮೀನಾಕ್ಷಿ ಮಾಲ್‌ ಹಿಂಭಾಗದಲ್ಲಿ ಬಾಡಿಗೆ ಮನೆ ಮಾಡಿಕೊಂಡು ಆರು ತಿಂಗಳಿಂದ ವಾಸಿಸುತ್ತಿದ್ದರು.

ತಾಯಿ ಜತೆ ಅನೈತಿಕ ಸಂಬಂಧ: ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿದ ಮಕ್ಕಳು

TAGGED:The accused had been riding around on a scooter for 3 hours with the body of his live-in partner Asha!
Share This Article
Facebook Twitter Copy Link Print
Previous Article KRS filled in June after 93 years 93 ವರ್ಷ ಬಳಿಕ ಜೂನ್‌ನಲ್ಲೇ ಭರ್ತಿಯಾದ ಕೆಆರ್‌ಎಸ್: ಕಾವೇರಿಗೆ ಬಾಗಿನ ಅರ್ಪಿಸಿ ದಾಖಲೆ ಬರೆದ ಸಿಎಂ ಸಿದ್ದರಾಮಯ್ಯ
Next Article Today’s prediction ಇಂದಿನ ರಾಶಿ ಭವಿಷ್ಯ, 01-07-2025, ಮಂಗಳವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?