newsics.com
ಚಾಮರಾಜನಗರ: ಪ್ರೀತಿಸಿದ ಹುಡುಗಿ ಕೈಕೊಟ್ಟಿದ್ದಕ್ಕೆ ಮನನೊಂದ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬನ್ನಿತಾಳಪುರದಲ್ಲಿ ನಡೆದಿದೆ.
ಸಾವಿಗೂ ಮುನ್ನ ವಿಡಿಯೋ ಮಾಡಿ ಸಾವಿನ ಸತ್ಯವನ್ನು ರಿವೀಲ್ ಮಾಡಿದ್ದಾನೆ. 24 ವರ್ಷದ ಸಂತೋಷ್ ಆತ್ಮಹತ್ಯೆ ಮಾಡಿಕೊಂಡ ಯುವಕ. ಹುಡುಗಿ ಬಿಟ್ಟು ಹೋದ ಕಾರಣಕ್ಕೆ ಆತ ಭೂಮಿಯನ್ನೇ ಬಿಟ್ಟು ಹೋಗಿದ್ದಾನೆ. ದುಡುಕಿನ ನಿರ್ಧಾರ ತೆಗೆದುಕೊಂಡು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಸಂತೋಷ್ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ವಿಡಿಯೋ ಮಾಡಿ ವಾಟ್ಸಾಪ್ ಸ್ಟೇಟಸ್ಗೆ ಹಾಕಿದ್ದಾನೆ. ಆತನ ಸಾವಿನ ಹಿಂದಿನ ಕಾರಣಗಳನ್ನು ಬಿಚ್ಚಿಟ್ಟಿದ್ದಾನೆ. ನೇಣಿಗೆ ಶರಣಾಗುವ ಮುನ್ನ ವೀಡಿಯೊ ಮಾಡಿ ವಾಟ್ಸ್‌ಆಪ್ ಸ್ಟೇಟಸ್‌ನಲ್ಲಿ ತಮ್ಮಿಬ್ಬರ ಫೋಟೋಗಳೊಂದಿಗೆ ಹಂಚಿಕೊಂಡಿದ್ದಾರೆ. ಸಂತೋಷ್ ಸಾಯುವ ಮುನ್ನ ಆತನ ಕಥೆಯನ್ನು ಮತ್ತು ನಡೆದ ಘಟನೆಯನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುವಂತೆ ಮಾಡಿದ್ದಾನೆ.
ತೆರಕಣಾಂಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭವಾಗಿದೆ. ಸಂತೋಷ್ ಮತ್ತು ಸಾಗಡೆ ಗ್ರಾಮದ ಯುವತಿ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ, ಯುವತಿಯು ಬೇರೊಬ್ಬ ಯುವಕನಿಗೆ ಮೆಸೇಜ್ ಮಾಡ್ತಿದ್ದಳಂತೆ. ಹೀಗೆ ಸಂದೇಶ ಕಳುಹಿಸುತ್ತಿದ್ದದ್ದನ್ನು ಸಂತೋಷ್ ಪ್ರಶ್ನಿಸಿದ್ದಾನೆ. ಇದರಿಂದ ಆಕೆ ಸಂತೋಷ್‌ನಿಂದ ದೂರವಾಗಿದ್ದಾಳೆ ಎಂದು ತಿಳಿದುಬಂದಿದೆ.