ಕೋತಿಗಳ ಮಾರಣಹೋಮ : ವಿಷಪ್ರಾಶನದಿಂದ 20 ಕ್ಕೂ ಹೆಚ್ಚು ಮಂಗಗಳ ಸಾವು

newsics.com ಚಾಮರಾಜನಗರ : ಚಾಮರಾಜನಗರದಲ್ಲಿ ಐದು ಹುಲಿಗಳ ವಿಷಪ್ರಾಶಸನ ಬೆನ್ನಲ್ಲೆ ಮತ್ತೊಂದು ಪ್ರಕರಣ ಪತ್ತೆಯಾಗಿದ್ದು, ಗುಂಡ್ಲುಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 20 ಕ್ಕೂ ಹೆಚ್ಚು ಕೋತಿಗಳು ವಿಷಪ್ರಾಶಸನದಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಕೋತಿಗಳಿಗೆ ಬೇರೆಡೆ ವಿಷ ಹಾಕಿ ಕೊಂದು ಇಲ್ಲಿ ತಂದು ಹಾಕಿರುವ ಶಂಕೆ ವ್ಯಕ್ತವಾಗಿದೆ. ಗುಂಡ್ಲುಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕಂದೇಗಾಲ-ಕೊಡಸೋಗೆ ರಸ್ತೆಯಲ್ಲಿ 20 ಕ್ಕೂ ಹೆಚ್ಚು ಕೋತಿಗಳ ಶವ ಪತ್ತೆಯಾಗಿವೆ. ಚಾಮರಾಜನಗರದ ಮಲೆ ಮಹದೇಶ್ವರ … Continue reading ಕೋತಿಗಳ ಮಾರಣಹೋಮ : ವಿಷಪ್ರಾಶನದಿಂದ 20 ಕ್ಕೂ ಹೆಚ್ಚು ಮಂಗಗಳ ಸಾವು