newsics.com
ಬರ್ಮಿಂಗ್ಹ್ಯಾಮ್ನ ಎಡ್ಜ್‌ಬಾಸ್ಟನ್ ಮೈದಾನದಲ್ಲಿ ನಡೆಯುತ್ತಿರುವ 2ನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ಸ್ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು. ಇದರಿಂದ ಟೀಮ್ ಇಂಡಿಯಾ ಮೊದಲ ಬ್ಯಾಟಿಂಗ್ ಮಾಡುತ್ತಿದೆ. ಈಗಾಗಲೇ ಒಂದು ದಿನ ಮುಗಿದಿದ್ದು ಎರಡನೇ ದಿನದಲ್ಲಿ ಟೀಮ್ ಇಂಡಿಯಾ ಬ್ಯಾಟಿಂಗ್ ಮುಂದುವರೆಸಿದೆ.
ಭಾರತ ಟೆಸ್ಟ್ ತಂಡದ ನಾಯಕ ಶುಭ್ಮನ್ ಗಿಲ್ ಇಂಗ್ಲೆಂಡ್ ವಿರುದ್ಧದ ಬರ್ಮಿಂಗ್ಹ್ಯಾಮ್ ಟೆಸ್ಟ್ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿ ದ್ವಿಶತಕ ಗಳಿಸಿದ್ದಾರೆ. ಅವರು 300 ಕ್ಕೂ ಹೆಚ್ಚು ಎಸೆತಗಳನ್ನು ಆಡುವ ಮೂಲಕ ಈ ಸಾಧನೆ ಮಾಡಿದ್ದಾರೆ. ಇದಕ್ಕೂ ಮೊದಲು, ಗಿಲ್ ಹೆಡಿಂಗ್ಲಿಯಲ್ಲಿಯೂ ಅದ್ಭುತ ಶತಕ ಗಳಿಸಿದ್ದರು. ಆದರೆ ಈ ಬಾರಿ ಗಿಲ್ ತಮ್ಮ ಬ್ಯಾಟಿಂಗ್‌ನಿಂದ ಇಂಗ್ಲೆಂಡ್ ಬೌಲರ್ಗಳ ಬೆವರಿಳಿಸಿದರು.
ಐದು ವಿಕೆಟ್ಗೆ 305 ರನ್ಗಳಿಂದ ಇಂದು ಇನ್ನಿಂಗ್ಸ್ ಆರಂಭಿಸಿದ ಭಾರತ ತಂಡ ಉತ್ತಮ ಬ್ಯಾಟಿಂಗ್ ಮಾಡುತ್ತಿದೆ. ನಿನ್ನೆಯೇ ಸೆಂಚುರಿ ಸಿಡಿಸಿದ್ದ ಶುಭ್ಮನ್ ಗಿಲ್ ಇಂದಿಗೆ ಬ್ಯಾಟಿಂಗ್ ಕಾಯ್ದುಕೊಂಡಿದ್ದರು. ಅದರಂತೆ ಇಂಗ್ಲೆಂಡ್ ವಿರುದ್ಧ ಇಂದು ಅದ್ಭುತವಾದ ಡಬಲ್ ಹಂಡ್ರೆಂಡ್ ಬಾರಿಸಿ ಸಂಭ್ರಮಿಸಿದ್ದಾರೆ. ಇನ್ನಿಂಗ್ಸ್ನಲ್ಲಿ 311 ಎಸೆತಗಳನ್ನು ಎದುರಿಸಿದ ಶುಭ್ಮನ್ ಗಿಲ್ ಎರಡು ಸಿಕ್ಸರ್ ಹಾಗೂ 21 ಮನಮೋಹಕವಾದ ಬೌಂಡರಿಗಳಿಂದ 200 ರನ್ ಬಾರಿಸಿದ್ದಾರೆ.