newsics.com
ಬೆಂಗಳೂರು: ಕರ್ನಾಟಕದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಕೆಲವು ಜಿಲ್ಲೆಗಳಲ್ಲಿ ಸಾಲು ಸಾಲು ಅವಾಂತರಗಳೇ ಸೃಷ್ಟಿಯಾಗುತ್ತಿವೆ. ಮಳೆಹಾನಿ ಪ್ರದೇಶಗಳಲ್ಲಿ ಜನರ ಒದ್ದಾಟ ಹೇಳತೀರದಾಗಿದೆ. ಮಲೆನಾಡಿನಲ್ಲಿ ಮಳೆ ಅಬ್ಬರಕ್ಕೆ ಬೃಹತ್ ಮರಗಳು ಧರೆಗುರುಳಿವೆ. ಭಾರಿ ಮಳೆಯ ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ ಕೆಲವು ಜಿಲ್ಲೆಗಳಲ್ಲಿ ಶಾಲಾ ಕಾಲೇಜಿಗಳಿಗೆ ರಜೆ ನೀಡಲಾಗಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನೆಲೆ, ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ನಾಳೆ ರಜೆ ಘೋಷಿಸಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ ಆದೇಶ ಹೊರಡಿಸಿದ್ದಾರೆ.
ಭಾರತೀಯ ಹವಾಮಾನ ಇಲಾಖೆ ಕರ್ನಾಟಕದ ಕರಾವಳಿ ಮತ್ತು ಒಳನಾಡಿನ ಹಲವು ಜಿಲ್ಲೆಗಳಲ್ಲಿ ಜುಲೈ 4, 2025 ರಂದು ಭಾರೀ ಮತ್ತು ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದೆ. ರಾಜ್ಯದ ಎಂಟು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಬೆಳಗಾವಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.