School Holiday ಭಾರೀ ಮಳೆ ಹಿನ್ನೆಲೆ: ಶುಕ್ರವಾರ ಈ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ರಜೆ

newsics.com ಬೆಂಗಳೂರು: ಕರ್ನಾಟಕದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಕೆಲವು ಜಿಲ್ಲೆಗಳಲ್ಲಿ ಸಾಲು ಸಾಲು ಅವಾಂತರಗಳೇ ಸೃಷ್ಟಿಯಾಗುತ್ತಿವೆ. ಮಳೆಹಾನಿ ಪ್ರದೇಶಗಳಲ್ಲಿ ಜನರ ಒದ್ದಾಟ ಹೇಳತೀರದಾಗಿದೆ. ಮಲೆನಾಡಿನಲ್ಲಿ ಮಳೆ ಅಬ್ಬರಕ್ಕೆ ಬೃಹತ್ ಮರಗಳು ಧರೆಗುರುಳಿವೆ. ಭಾರಿ ಮಳೆಯ ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ ಕೆಲವು ಜಿಲ್ಲೆಗಳಲ್ಲಿ ಶಾಲಾ ಕಾಲೇಜಿಗಳಿಗೆ ರಜೆ ನೀಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನೆಲೆ, ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ನಾಳೆ ರಜೆ ಘೋಷಿಸಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ ತಾಲೂಕಿನ ಶಾಲೆಗಳಿಗೆ … Continue reading School Holiday ಭಾರೀ ಮಳೆ ಹಿನ್ನೆಲೆ: ಶುಕ್ರವಾರ ಈ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ರಜೆ