newsics.com
ಕನ್ನಡ ನಟಿ ಹಾಗೂ ರಾಜಕಾರಣಿ ಭಾವನಾ ರಾಮಣ್ಣ ತಮ್ಮ 40ನೇ ವಯಸ್ಸಿನಲ್ಲಿ ತಾಯಿಯಾಗಲು ಸಿದ್ಧವಾಗಿದ್ದಾರೆ. ಪ್ರಸ್ತುತ 6 ತಿಂಗಳ ಗರ್ಭಿಣಿಯಾಗಿರುವ ಆಕೆ ಅವಳಿ ಮಕ್ಕಳ ನಿರೀಕ್ಷೆಯಲ್ಲಿದ್ದಾರೆ.
ಐವಿಎಫ್ ಮೂಲಕ ತಾಯಿ ಆಗುತ್ತಿರುವ ನಟಿ ಭಾವನ ಅವರು ಸೋಷಿಯಲ್ ಮೀಡಿಯದಾದಲ್ಲಿ ತಾಯಿಯಾಗುತ್ತಿರೋ ಖುಷಿಯ ಸಂಗತಿಯನ್ನು ರಿವೀಲ್ ಮಾಡಿದ್ದಾರೆ.
ಭಾವನಾ ರಾಮಣ್ಣ, ತಮ್ಮ ಬಾಲ್ಯದಿಂದಲೂ ಮಕ್ಕಳ ಜೊತೆಗಿರುವುದನ್ನು ಇಷ್ಟಪಡುತ್ತಿದ್ದರು. ಆದರೆ, ತಮ್ಮ 20ನೇ ವಯಸ್ಸಿನಲ್ಲಿ ತಾಯಿಯಾಗುವ ಯೋಚನೆ ಗಂಭೀರವಾಗಿ ತಟ್ಟಿರಲಿಲ್ಲ. 30ನೇ ವಯಸ್ಸಿನಲ್ಲಿ ಪ್ರೀತಿಯ ಆಕಾಂಕ್ಷೆಯಿದ್ದರೂ, ತಾಯಿಯಾಗುವ ಬಗ್ಗೆ ಯೋಚನೆ ಮಾಡಿರಲಿಲ್ಲ. “ನಾನು ಯಾವಾಗಲೂ ಮಕ್ಕಳ ಸುತ್ತಲಿರುವ ವಾತಾವರಣದಲ್ಲಿ ಬೆಳೆದೆ. ನನ್ನ ತಂದೆ-ತಾಯಿ, ಮೂವರು ಸಹೋದರ-ಸಹೋದರಿಯರು, ಸಂಬಂಧಿಕರು ಮತ್ತು ಸ್ನೇಹಿತರ ಜೊತೆ ತುಂಬಿದ ಮನೆಯಲ್ಲಿ ಬೆಳೆದೆ. ಆದರೆ 40 ತಲುಪಿದಾಗ ತಾಯಿಯಾಗಬೇಕೆಂಬ ಕರೆಯನ್ನು ತಡೆಯಲಾಗಲಿಲ್ಲ” ಎಂದು ʻಟೈಮ್ಸ್ ಆಫ್ ಇಂಡಿಯಾʼ ಜೊತೆ ಭಾವನಾ ಮಾಹಿತಿ ಹಂಚಿಕೊಂಡಿದ್ದಾರೆ