newsics.com
ರಾಜ್ಯದಲ್ಲಿ ವರುಣಾರ್ಭಟ ಜೋರಾಗುತ್ತಿದ್ದಂತೆ ಹವಾಮಾನ ಇಲಾಖೆ, ಶಿಕ್ಷಣ ಇಲಾಖೆ ಎಚ್ಚರಿಕೆಯನ್ನು ನೀಡುತ್ತಲೇ ಇರುತ್ತದೆ. ಜುಲೈ 5ರಂದು ಕರ್ನಾಟಕದಲ್ಲಿ ಹಲವು ಕಡೆ ಭಾರೀ ಮಳೆಯಾಗಲಿದ್ದು, ಕೆಲ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಹಿನ್ನೆಲೆ, ಮುಂಜಾಗ್ರತಾ ಕ್ರಮವಾಗಿ ಚಿಕ್ಕಮಗಳೂರು ಜಿಲ್ಲೆಯ ಮಲೆನಾಡಿನ 6 ತಾಲೂಕಿನ ಶಿಶು ಪಾಲನಾ ಅಂಗನವಾಡಿ ಕೇಂದ್ರಗಳಿಗೆ ನಾಳೆ ರಜೆ ಘೋಷಣೆ ಮಾಡಿದ್ದಾರೆ. ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, NR ಪುರ, ಚಿಕ್ಕಮಗಳೂರು ತಾಲೂಕುಗಳಿಗೆ ರಜೆ ಘೋಷಣೆ ಮಾಡಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.
ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಎಚ್ಚರಿಕೆಯು ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಜೊತೆಗೆ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಬೆಳಗಾವಿ, ಧಾರವಾಡ ಮತ್ತು ಗದಗ ಜಿಲ್ಲೆಗಳಿಗೆ ವಿಶೇಷವಾಗಿ ಒಳಗೊಂಡಿದೆ. ಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಜನರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.