newsics.com
ಪುತ್ತೂರು: ನಗರದ ಬಿಜೆಪಿ ಮುಖಂಡನ ಪುತ್ರನ ವಿರುದ್ಧ ಲವ್, ಸೆಕ್ಸ್, ದೋಖಾ ಆರೋಪ ಪ್ರಕರಣ ದಾಖಲಾಗಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಯೊಬ್ಬಳನ್ನು ಗರ್ಭಿಣಿ ಮಾಡಿದ ಪ್ರಕರಣದಲ್ಲಿ ಸ್ಥಳೀಯ ಬಿಜೆಪಿ ಮುಖಂಡನ ಪುತ್ರ ಶ್ರೀಕೃಷ್ಣ ನಾಪಾತೆಯಾಗಿದ್ದ.ಇದೀಗ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಕೃಷ್ಣ ಜೆ.ರಾವ್ ಬಂಧಿತ ಆರೋಪಿ. ಬಿಜೆಪಿ ಮುಖಂಡನ ಪುತ್ರನಾಗಿರುವ ಕೃಷ್ಣ ಜೆ.ರಾವ್ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಮನೆಗೆ ಕರೆದೊಯ್ದು ಪದೇ ಪದೇ ಅತ್ಯಾಚಾರವೆಸಗಿದ್ದ. ಯುವತಿ ಗರ್ಭಿಣಿಯಾಗುತ್ತಿದ್ದಂತೆ ಆಕೆಯನ್ನು ಮದುವೆಯಾಗಲು ನಿರಾಕರಿಸಿದ್ದ. ನೊಂದ ಸಂತ್ರಸ್ತೆ ಪುತ್ತೂರು ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಳು. ಕೆಲ ದಿನಗಳ ಹಿಂದಷ್ಟೆ ಸಂತ್ರಸ್ತೆ ಮಗುವಿಗೆ ಜನ್ಮ ನೀಡಿದ್ದರು. ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಆರೋಪಿ ಕೃಷ್ಣ ಜೆ.ರಾವ್ ಗಾಗಿ ಪೊಲೀರು ಹುಡುಕಾಟ ನಡೆಸಿದ್ದರು.
ನಿನ್ನೆ ರಾತ್ರಿ ಲವ್, ಸೆಕ್ಸ್, ದೋಖಾ ಪ್ರಕರಣದ ಆರೋಪಿ ಕೃಷ್ಣ ಜೆ ರಾವ್ ಎಂಬಾತನನ್ನು ಪೋಲೀಸರು ಮೈಸೂರಿನಲ್ಲಿ ವಶಕ್ಕೆ ಪಡೆದಿದ್ದು, ನಿನ್ನೆ ರಾತ್ರಿಯೇ ಪುತ್ತೂರಿಗೆ ಕರೆತಂದಿರುವ ಪೋಲೀಸರು ಇಂದು ಸಂಜೆ ವೇಳೆಗೆ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ. ಕಳೆದ 10 ದಿನಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಬೇಕೆಂದು ಹಲವು ಸಂಘಟನೆಗಳಿಂದ ಪ್ರತಿಭಟನೆಯೂ ನಡೆದಿತ್ತು.ಇಂದು ಸಂಜೆ ವೇಳೆಗೆ ಕೋರ್ಟ್ ಗೆ ಹಾಜರುಪಡಿಸುವ ಸಾಧ್ಯತೆ ಇದೆ