Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರೇಣುಕಾಸ್ವಾಮಿ ರೀತಿ ಮತ್ತೊಂದು ಅಮಾನುಷ ಕೃತ್ಯ : ಹುಡುಗಿ ವಿಚಾರಕ್ಕೆ ಯುವಕನ ಬಟ್ಟೆ ಬಿಚ್ಚಿ ಹಲ್ಲೆ!
ಕರ್ನಾಟಕಪ್ರಮುಖ

ರೇಣುಕಾಸ್ವಾಮಿ ರೀತಿ ಮತ್ತೊಂದು ಅಮಾನುಷ ಕೃತ್ಯ : ಹುಡುಗಿ ವಿಚಾರಕ್ಕೆ ಯುವಕನ ಬಟ್ಟೆ ಬಿಚ್ಚಿ ಹಲ್ಲೆ!

Share
1 Min Read
SHARE

newsics.com

ನೆಲಮಂಗಲ: ಹುಡುಗಿ ವಿಚಾರಕ್ಕೆ ಯುವಕನ ಬಟ್ಟೆ ಬಿಚ್ಚಿ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ಸೋಲದೇವನಹಳ್ಳಿಯಲ್ಲಿ ನಡೆದಿದೆ.

ಕುಶಾಲ್ ಹಲ್ಲೆಗೊಳಗಾದ ಯುವಕ ಎಂದು ‌ತಿಳಿದು ಬಂದಿದೆ. ಪ್ರಕರಣ ಸಂಬಂಧ ಸೋಲದೇವನಹಳ್ಳಿ ಠಾಣೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಕಾಲೇಜಿನ ದಿನಗಳಲ್ಲಿ ಕುಶಾಲ್ ಮತ್ತು ಯುವತಿ ಮಧ್ಯೆ ಪ್ರೀತಿ ಅರಳಿತ್ತು. ಎರಡು ವರ್ಷದ ಪ್ರೀತಿ ಕೆಲವು ತಿಂಗಳ ಹಿಂದೆ ಮುರಿದು ಬಿದ್ದಿತ್ತು. ಈ ವೇಳೆ ಯುವತಿಗೆ ಬೇರೊಬ್ಬ ಹುಡುಗನ ಪರಿಚಯವಾಗಿತ್ತು. ಇದನ್ನು ಸಹಿಸಲಾಗದೆ ಕುಶಾಲ್, ಯುವತಿಗೆ ಅಶ್ಲೀಲ ಸಂದೇಶ ಕಳುಹಿಸಿದ್ದನು. ಹೀಗಾಗಿ, ಯುವತಿಯ ಗೆಳೆಯ ಮತ್ತು ಆತನ ಸ್ನೇಹಿತರು ಸೇರಿಕೊಂಡು ಮಾತುಕತೆ ಮೂಲಕ ಬಗೆಹರಿಸಿಕೊಳ್ಳೋಣ ಅಂತ ಕುಶಾಲ್ನನ್ನು ಬಾಗಲಗುಂಟೆಯ ಎಜಿಪಿ ಲೇಔಟ್ಗೆ ಕರೆಸಿಕೊಂಡು ಅಪಹರಿಸಿದ್ದಾರೆ.

ಬಳಿಕ, ಆರೋಪಿಗಳು ಕುಶಾಲ್ನನ್ನು ಕಾರಿನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಆತನ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ಕುಶಾಲ್ನ ಬಟ್ಟೆ ಬಿಚ್ಚಿ ಮರ್ಮಾಂಗ ತುಳಿದು ವಿಕೃತಿ ಮೆರೆದಿದ್ದಾರೆ. ಕುಶಾಲ್ನ ಬಟ್ಟೆ ಬಿಚ್ಚಿ ಹಲ್ಲೆ ಮಾಡಿರುವುದನ್ನು ಆರೋಪಿಗಳು ವಿಡಿಯೋ ಮಾಡಿಕೊಂಡಿದ್ದಾರೆ. ವಿಡಿಯೋದಲ್ಲಿ ಆರೋಪಿಗಳು, ರೇಣುಕಾಸ್ವಾಮಿ ಕೊಲೆ ಕೇಸ್ನಂತೆ ಇದೂ ಆಗುತ್ತೆ. ಎ1 ಹೇಮಂತ ಎ2 ನಾನು ಎಂದು ವಿಡಿಯೋದಲ್ಲಿ ಹೇಳಿದ್ದಾರೆ. ಬಳಿಕ, ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವುದಾಗಿ ಕುಶಾಲ್ಗೆ ಆರೋಪಿಗಳು ಬೆದರಿಕೆ ಹಾಕಿದ್ದಾರೆ.

ಈ ಘಟನೆ ಸಂಬಂಧ ಸೋಲದೇವನಹಳ್ಳಿ ಠಾಣೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಹೇಮಂತ್, ಯಶವಂತ್, ಶಿವಶಂಕರ್, ಶಶಾಂಕ್ ಗೌಡ ಬಂಧಿತರು. ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯಾದ್ಯಂತ ಬಿ – ಖಾತಾ ಆಸ್ತಿಗೆ ದುಪ್ಪಟ್ಟು ತೆರಿಗೆ; ಕರಡು ನಿಯಮ ಹೊರಡಿಸಿದ ಸರ್ಕಾರ

TAGGED:Another inhuman act like Renukaswamy: Young man stripped and assaulted over a girl!
Share This Article
Facebook Twitter Copy Link Print
Previous Article Today’s prediction ಇಂದಿನ ರಾಶಿ ಭವಿಷ್ಯ, 07-07-2025, ಸೋಮವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?
Next Article ASTRO ಇಂದು ಚಂದ್ರಾಧಿ ಯೋಗ: ಐದು ರಾಶಿಗಳ ಜನರಿಗೆ ಭಾರೀ ಅದೃಷ್ಟ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?